ಶಿವಮೊಗ್ಗ : ಮೇ.26ರಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಲೆನಾಡು ಮುಸ್ಲೀಂ ಒಕ್ಕೂಟದಿಂದ ವಕ್ಫ್ ಕಾಯ್ದೆ ತಿದ್ದುಪಡಿ 2025 ವಿರೋಧಿಸಿ ಮೇ 26ರಂದು ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ಮುಸ್ಲೀಂ ಒಕ್ಕೂಟ ಸದ್ದಾಂ ದೊಡ್ಮನೆ ಹೇಳಿದ್ದಾರೆ.
ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮೇ.26ರಂದು ಬೆಳಿಗ್ಗೆ 11ಕ್ಕೆ ನಗರಸಭೆ ಆವರಣದ ಗಾಂಧಿ ಮೈದಾನದಲ್ಲಿ ವಕ್ಫ್ ಕಾಯ್ದೆ ತಿದ್ದುಪಡಿಯಿಂದ ಮೂಲ ಧಾರ್ಮಿಕ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತಿರುವುದು, ವಕ್ಫ್ ಆಸ್ತಿಯ ಸಂರಕ್ಷಣೆ ನಮ್ಮ ಜವಾಬ್ದಾರಿ ಮತ್ತು ಸಂವಿಧಾನ ಉಳಿಸಿ ವಕ್ಫ್ ಉಳಿಸಿ ಘೋಷವಾಕ್ಯದಡಿ ಪ್ರತಿಭಟನಾ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಡಾ. ಎಂ.ಎಸ್.ಎಂ. ಅಬ್ದುಲ್ ರಶೀದ್ ಝೈನಿ ಸಖಾಫಿ, ಸುಧೀರ್ ಕುಮಾರ್ ಮುರೊಳ್ಳಿ, ಮೌಲಾನಾ ಮಹ್ಮದ್ ಅಬು ತಾಲೀಬ್ ರಹ್ಮಾನಿ ಸಾಹಬ್, ಅಬ್ದುಲ ಮಜೀದ್ ಸಾಹೇಬ್, ಮೌಲಾನ್ ಸೈಯದ್ ತನ್ವೀರ್ ಹಾಶ್ಮಿ ಸಾಬ್ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು.
ವಕ್ಫ್ ಮೂಲಕ ಸಾಮಾಜಿಕ, ಶೈಕ್ಷಣಿಕ, ಆರೋಗ್ಯಕರ ಚಟುವಟಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಮುಸ್ಲೀಂ ಸಮುದಾಯದ ಧಾರ್ಮಿಕ ಹಕ್ಕುಗಳಿಗೆ ಧಕ್ಕೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ವಕ್ಫ್ ಕಾಯ್ದೆ ತಿದ್ದುಪಡಿಯಿಂದ ಸಮುದಾಯದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದ್ದು ಈ ಹಿನ್ನೆಲೆಯಲ್ಲಿ ನಮ್ಮ ಹಕ್ಕೊತ್ತಾಯ ಮಂಡಿಸಲು ಈ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ವೇಳೆ ಮಹ್ಮದ್ ತುಫೇಲ್, ಮಹ್ಮದ್ ಅಶ್ರಾಫ್ ರಾಜಾ, ಮಹ್ಮದ್ ಆಲಿ ಮದನಿ, ಮಹ್ಮದ್ ಬಿಲಾಲ್, ಮಹ್ಮದ್ ಫಾರೂಕ್ ಉಪಸ್ಥಿತರಿದ್ದರು.
ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್
BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ