ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಸಂಪುಟ ಸಭೆಯಲ್ಲಿ ಆರ್ ಎಸ್ ಎಸ್ ಸೇರಿದಂತೆ ಖಾಸಗಿ ಸಂಘ ಸಂಸ್ಥೆಗಳು ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ನಡೆಸಬೇಕಾದರೆ, ಅನುಮತಿ ಪಡೆಯುವುದು ಕಡ್ಡಾಯ ಎಂದು ನಿರ್ಧಾರ ತೆಗೆದುಕೊಂಡಿತು. ಇದೀಗ ಒಂದಡೆ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಷೇಧದ ಪ್ರಯತ್ನ ನಡೆಯುತ್ತಿದ್ದರೆ, ಮತ್ತೊಂದು ಕಡೆ ಆರ್ ಎಸ್ ಎಸ್ ಸಂಬಂಧಿತ ಕಾರ್ಯಕ್ರಮಗಳು ಮುಂದುವರೆದಿದೆ.
ಹೌದು ಆರ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಇದೀಗ ಬೌದ್ಧಿಕ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ನವೆಂಬರ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಆರ್‌ಎಸ್‌ಎಸ್ ಬೌದ್ಧಿಕ ಕಾರ್ಯಕ್ರಮ ನಡೆಯಲಿದೆ. ಈ ಒಂದು ಕಾರ್ಯಕ್ರಮ ಎರಡು ದಿನ ನಡೆಯಲಿದ್ದು ಮೋಹನ್ ಭಾಗವತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನವೆಂಬರ್ 8 ಮತ್ತು 9ರಂದು ಹೊಸಕೆರೆಹಳ್ಳಿಯ ಪಿ ಇ ಎಸ್ ಕಾಲೇಜಿನಲ್ಲಿ ಈ ಒಂದು ಕಾರ್ಯಕ್ರಮ ನಡೆಯಲಿದೆ.
ದಕ್ಷಿಣ ಭಾರತ ಭಾಗದಿಂದ ಸುಮಾರು 1000 ಅಹ್ವಾನಿತರು ಭಾಗಿಯಾಗಲಿದ್ದಾರೆ. ದೇಶದ ನಾಲ್ಕು ಕಡೆ ಆರ್ ಎಸ್ ಎಸ್ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ನಾಳೆ ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರದಲ್ಲಿ ಆರ್‌ಎಸ್ ಪತಸಂಚಲ ನಡೆಸಲಿದೆ ಚಿತ್ತಾಪುರದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಈ ಒಂದು ಹೊಸ ಸಂಚಲನ ನಡೆಯಲಿದೆ.