ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಈ ವಾರವೇ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು.
ಇದೀಗ 11 ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಜಮೆ ಆಗಿದ್ದು, ಇನ್ನೂ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಒಟ್ಟಿಗೆ ಹಣ ಜಮಾ ಆಗಲಿದೆ.
ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ ಜೂನ್ ತಿಂಗಳ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.
ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ–ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ–ಕೆವೈಸಿ ಅಪ್ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.