ಚಿತ್ರದುರ್ಗ : ನ.27ಕ್ಕೆ ರಂದು ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನದಡಿ 2 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಆಯೋಗದ ಅಧ್ಯಕ್ಷ ನೆಹರು ಚ. ಓಲೇಕಾರ ತಿಳಿಸಿದ್ದಾರೆ.
ರಾಜ್ಯ ಮಟ್ಟದ ವೀರ ವನಿತೆ ಒನಕೆ ಓಬವ್ವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು , ರಾಜ್ಯ ಸರಕಾರದಿಂದ ಅದ್ದೂರಿಯಾಗಿ ಓಬವ್ವ ಜಯಂತಿಯನ್ನು ಆಚರಣೆ ಮಾಡಲು ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ, ಇದಕ್ಕಾಗಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನದಡಿ 2 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ ಎಂದರು.
ಸಾಹಸ ಮೆರೆದು ಚಿತ್ರದುರ್ಗದ ಹೆಸರನ್ನು ಇತಿಹಾಸದ ಪುಟಗಳಲ್ಲಿ ದಾಖಲಿಸಿದ ವೀರ ವನಿತೆ ಒನಕೆ ಓಬವ್ವರ ರಾಜ್ಯಮಟ್ಟದ ಜಯಂತಿಯನ್ನು ಸರಕಾರದಿಂದ ಆಚರಿಸಲಾಗುತ್ತಿದ್ದು, ನ.27ಕ್ಕೆ ಚಿತ್ರದುರ್ಗದಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ, ಅಂದು ಹೊಳಲ್ಕೆರೆ ರಸ್ತೆಯಿಂದ ಅದ್ಧೂರಿ ಮೆರವಣಿಗೆ ನಡೆಯಲಿದ್ದು, ವಿವಿಧ ಜಾನಪದ ಕಲಾಮೇಳಗಳು ಪಾಲ್ಗೊಳ್ಳಲಿವೆ. ನಾಡಿನಾದ್ಯಂತ ಸುಮಾರು 1 ಲಕ್ಷ ಮಂದಿ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.
ಒನಕೆ ಓಬವ್ವನ ಇತಿಹಾಸ
ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ.
ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು.ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದು ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರಿಗೆ ಒನಕೆ ಓಬವ್ವ ಎಂದು ಬಿರುದು ಸಿಕ್ಕಿತು.
ಒನಕೆ ಓಬವ್ವರ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದ್ದು. ಅವರನ್ನು ಕರ್ನಾಟಕದ ವೀರವನಿತೆಯರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಒನಕೆ ಓಬವ್ವ ಕ್ರೀಡಾಂಗಣ ಎಂದು ಅವರ ಹೆಸರನ್ನಿಟ್ಟು ಗೌರವಿಸಲಾಗಿದೆ. ಚಿತ್ರದುರ್ಗದ ಕೋಟೆಯಲ್ಲಿ ಓಬವ್ವ ಹೈದರಾಲಿಯ ಸೈನಿಕರನ್ನು ಸೋಲಿಸಿದ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತದೆ.
BIGG NEWS ; ಸ್ಲಂ ನಿವಾಸಿಗಳಿಗೆ ಮನೆ ಗಿಫ್ಟ್ ನೀಡಿದ ಪ್ರಧಾನಿ ಮೋದಿ ; 3024 ಕುಟುಂಬಗಳಿಗೆ ‘ಫ್ಲಾಟ್ ಕೀ’ ಹಸ್ತಾಂತರ
BREAKING: ಕೋರ್ಟ್ ಗೆ ಗೈರು ಹಾಜರಿ ಹಿನ್ನಲೆ: ಸಾಹಿತಿ ಪ್ರೊ.ಕೆಎಸ್ ಭಗವಾನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ