Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಖಾಸಗಿ ಉದ್ದಿಮೆಗಳ ‘ಮಹಿಳಾ ನೌಕರ’ರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ
KARNATAKA

BIG NEWS: ಖಾಸಗಿ ಉದ್ದಿಮೆಗಳ ‘ಮಹಿಳಾ ನೌಕರ’ರಿಗೂ ತಿಂಗಳಲ್ಲಿ ಒಂದು ದಿನ ವೇತನ ಸಹಿತ ‘ಋತುಚಕ್ರ ರಜೆ’: ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow0921/11/2025 5:37 AM

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವಂತ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೂ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆ ಹೊರಡಿಸಲಾಗಿದೆ. ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಹೊರಡಿಸುವ ಸಂಬಂಧ ಚರ್ಚಿಸಿ ವರದಿ ಸಲ್ಲಿಸಲು ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು, ತಜ್ಞವೈದ್ಯರು, ಕಾರ್ಮಿಕ ವರ್ಗಗಳ ಪ್ರತಿನಿಧಿಗಳು, ಕೈಗಾರಿಕಾ ಸಂಘದ ಪ್ರತಿನಿಧಿಗಳು, IT/BT ಪ್ರತಿನಿಧಿ, ಗಾರ್ಮೆಂಟ್ಸ್ ಮಾಲೀಕರ ಪ್ರತಿನಿಧಿ, ಪ್ರಾಧ್ಯಾಪಕರು, ಸಮಾಜ ಸೇವಕರು, ಮಾಲೀಕ ವರ್ಗದ ಪ್ರತಿನಿಧಿಗಳು, ಇತರೆ ಸದಸ್ಯರುಗಳನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು ಎಂದಿದೆ.

ಸದರಿ ತಜ್ಞರ ಸಮಿತಿಯು ವಿವಿಧ ಹಂತಗಳಲ್ಲಿ ಚರ್ಚಿಸಿ ಕಾರ್ಖಾನೆಗಳು, ಪ್ಲಾಂಟೇಷನ್, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಮೊದಲಾದವುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಅವರ ಋತುಚಕ್ರದ ಸಮಯದಲ್ಲಿ ವಾರ್ಷಿಕ 6 ಋತುಸ್ರಾವ ರಜೆಗಳನ್ನು ಬಳಸಿಕೊಳ್ಳಲು “ಋತುಚಕ್ರ ರಜಾನೀತಿ” ಜಾರಿಗೊಳಿಸುವಂತೆ ಶಿಫಾರಸ್ಸು ಮಾಡಿದ್ದು, ಮಹಿಳಾ ನೌಕರರಿಗೆ ವೇತನ ಸಹಿತ ಋತುಸ್ರಾವದ ರಜೆ ನೀಡುವ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಕೈಗಾರಿಕೆಗಳು ಮತ್ತು ಇತರೆ ಉದ್ದಿಮೆಗಳ ಮಾಲೀಕರು, ವಿವಿಧ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಪ್ರತಿನಿಧಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರ ಗಮನಕ್ಕಾಗಿ ಹಾಗೂ ಸಲಹೆ, ಸೂಚನೆ, ಆಕ್ಷೇಪಣೆ/ ಅಭಿಪ್ರಾಯ ಕೋರಿ ಇಲಾಖೆಯ ವೆಬ್‌ಸೈಟ್ karmikaspandana.gov.in ಸೇರಿದಂತೆ ದಿನಾಂಕ: 18-10-2025 ರಂದು ಪ್ರಕಟಿಸಲಾಗಿರುತ್ತದೆ ಎಂದಿದೆ.

ಕಾರ್ಮಿಕರು, ಕಾರ್ಮಿಕ ಸಂಘಗಳು, ಮಾಲೀಕರು, ಮಾಲೀಕ ಸಂಘಗಳು, ಮಹಿಳಾ ಸಂಘಟನೆಗಳು, ಸಾರ್ವಜನಿಕರು, ಸರ್ಕಾರಿ ನೌಕರರ ಒಕ್ಕೂಟ ಮೊದಲಾದವರಿಂದ ಪ್ರಸ್ತಾಪಿತ ಋತುಚಕ್ರ ರಜಾನೀತಿಯ ಸಂಬಂಧ ಒಟ್ಟು 75 ಅಭಿಪ್ರಾಯಗಳು ಸ್ವೀಕೃತವಾಗಿದ್ದು, ಈ ಪೈಕಿ 56 ಅಭಿಪ್ರಾಯಗಳು ಪಸ್ತಾಪಿತ ಋತುಚಕ್ರ ರಜಾನೀತಿಯ ಪರವಾಗಿರುತ್ತವೆ. ಉಳಿದಂತೆ 19 ಅಭಿಪ್ರಾಯಗಳು ವಿರುದ್ಧವಾಗಿರುತ್ತವೆ. ಉದ್ದೇಶಿತ ರಜಾನೀತಿಯನ್ನು ಬೆಂಬಲಿಸಿ ಸ್ವೀಕೃತವಾದ 56 ಅಭಿಪ್ರಾಯಗಳಲ್ಲಿ, 26 ಅಭಿಪ್ರಾಯಗಳು ಮಾಲೀಕ ವರ್ಗದವರು, 7 ಕಾರ್ಮಿಕ ಸಂಘಗಳು, 19 ನೌಕರರು, 1 ಸಾರ್ವಜನಿಕರು, 1 ಸರ್ಕಾರಿ ನೌಕರರ ಒಕ್ಕೂಟ, 2 ಮಹಿಳಾ ಸಂಘಗಳು ನೀಡಿರುತ್ತಾರೆ. ಅಲ್ಲದೇ ಪ್ರಸ್ತಾಪಿತ ಋತುಚಕ್ರ ರಜಾನೀತಿಯನ್ನು ಬೆಂಬಲಿಸಿರುವ ಕಾರ್ಮಿಕ/ಕಾರ್ಮಿಕ ಸಂಘಟನೆ/ ಮಹಿಳಾ ಸಂಘಟನೆ/ ಆಡಳಿತ ವರ್ಗದವರ 56 ಅಭಿಪ್ರಾಯಗಳಲ್ಲಿ 10 (10 ಅಭಿಪ್ರಾಯಗಳಲ್ಲಿ 4 ಆಡಳಿತ ವರ್ಗದ ಅಭಿಪ್ರಾಯಗಳು) ಅಭಿಪ್ರಾಯಗಳು ಪ್ರಸ್ತಾಪಿಸಿರುವ ವಾರ್ಷಿಕ 6 ರಜೆಗಳಿಗೆ ಬದಲಾಗಿ 12 ರಜೆಗಳನ್ನು ನೀಡುವಂತೆ ಕೋರಲಾಗಿರುತ್ತವೆ ಎಂದು ಹೇಳಿದೆ.

ಪ್ರಸ್ತಾಪಿತ ಋತುಚಕ್ರ ರಜಾನೀತಿಯ ಪರವಾಗಿ ಹೆಚ್ಚಿನ ಅಭಿಪ್ರಾಯಗಳು ಸ್ವೀಕೃತಗೊಂಡಿರುವುದರಿಂದ ಹಾಗೂ ಸದರಿ ರಜಾನೀತಿಯನ್ನು ರೂಪಿಸುವುದರಿಂದ ವಿವಿಧ ಉದ್ದಿಮೆಗಳಲ್ಲಿ ದುಡಿಯುವ ಮಹಿಳಾ ನೌಕರರ ಆರೋಗ್ಯ ಮತ್ತು ಯೋಗಕ್ಷೇಮ ಉತ್ತೇಜಿಸಲ್ಪಟ್ಟು, ಅವರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚುತ್ತದೆ. ಇದರಿಂದಾಗಿ ಉತ್ಪಾದನಾ ಚಟುವಟಿಕೆಗಳಲ್ಲಿ ಮಹಿಳಾ ನೌಕರರ ಭಾಗವಹಿಸುವಿಕೆ ಹೆಚ್ಚಿ ದೇಶದ ಉತ್ಪಾದನೆ ಹೆಚ್ಚಲು ಕಾರಣವಾಗುತ್ತದೆ. ಇದರಿಂದ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ ಹಾಗೂ ಋತುಚಕ್ರದ ರಜಾನೀತಿಯನ್ನು ರೂಪಿಸುವುದರಿಂದ ಮಹಿಳಾ ದುಡಿಮೆಗೆ ಸಂಬಂಧಿಸಿದಂತೆ ಕರ್ನಾಟಕವು ಒಂದು ಜಾಗತಿಕ ಉತ್ತಮ ಅಭ್ಯಾಸವನ್ನು ಹೊಂದಿದಂತಾಗುತ್ತದೆ ಎಂದು ಮೇಲೆ ಕ್ರ.ಸಂ.(2) ರಲ್ಲಿ ಆಯುಕ್ತರು, ಕಾರ್ಮಿಕ ಇಲಾಖೆ, ಇವರು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಸಚಿವ ಸಂಪುಟ ಟಿಪ್ಪಣಿಯಲ್ಲಿ “ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC ಗಳು, IT ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ “ಋತುಚಕ್ರ ರಜೆ ನೀತಿ, 2025″ ಅನ್ನು ಜಾರಿಗೆ ತರಲು” ಸಚಿವ ಸಂಪುಟವು ಅನುಮೋದಿಸಿರುತ್ತದೆ ಎಂದು ತಿಳಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ತೋಟ ಕಾರ್ಮಿಕರ ಕಾಯ್ದೆ 1951, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ ಗುತ್ತಿಗೆ/ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ, ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಸಂಬಂಧಿಸಿದ ಉದ್ಯೋಗದಾತರು ಒದಗಿಸುವಂತೆ ಆದೇಶಿಸಿದೆ.

ಷರತ್ತುಗಳು:

1. ಮಹಿಳಾ ನೌಕರರು ಆಯಾ ತಿಂಗಳ “ಋತುಚಕ್ರ ರಜೆ” ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು, ಹಿಂದಿನ ತಿಂಗಳ “ಋತುಚಕ್ರ ರಜೆ” ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (carry over) ಅವಕಾಶವಿರುವುದಿಲ್ಲ.

2. ಪ್ರತಿ ತಿಂಗಳು ಒಂದು ದಿನದ “ಋತುಚಕ್ರ ರಜೆ” ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…

BIG NEWS: ‘BMTC ಬಸ್ ನಿರ್ವಾಹಕ’ರೇ ಎಚ್ಚರ: ಇನ್ಮುಂದೆ ‘ಶಕ್ತಿ ಯೋಜನೆ ಟಿಕೆಟ್’ ಅನಧಿಕೃತವಾಗಿ ಕೊಟ್ರೆ ಈ ಕ್ರಮ ಫಿಕ್ಸ್

BREAKING ;’IBPS ಕ್ಲರ್ಕ್ ಪ್ರಿಲಿಮ್ಸ್’ ಫಲಿತಾಂಶ ಬಿಡುಗಡೆ ; ಈ ರೀತಿ ಸ್ಕೋರ್ಕಾರ್ಡ್ ಡೌನ್ಲೋಡ್ ಮಾಡಿ!

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.