ಕೊಯಮತ್ತೂರು (ತಮಿಳುನಾಡು): ಕೊಯಮತ್ತೂರಿನ ಉಕ್ಕಡಂ ಬಳಿಯ ಕೊಟ್ಟೈಮೇಡುವಿನ ಈಶ್ವರನ್ ದೇವಸ್ಥಾನದ ಮುಂಭಾಗದಲ್ಲಿ ಭಾನುವಾರ ಮುಂಜಾನೆ ಕಾರಿನಲ್ಲಿದ್ದ ಸಿಲಿಂಟರ್ ಸ್ಫೋಟಗೊಂಡ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
BREAKING NEWS : ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ
ಶಬ್ದ ಕೇಳಿದ ಸಾರ್ವಜನಿಕರು ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗುತ್ತಿದೆ.
ಪ್ರಾಥಮಿಕ ತನಿಖೆಯಲ್ಲಿ ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಕಾರು ಎರಡು ತುಂಡಾಗಿದೆ. ಕಾರಿನ ನೋಂದಣಿ ಸಂಖ್ಯೆ ಪೊಲ್ಲಾಚಿ ವಿಳಾಸದಲ್ಲಿ ಇರುವುದರಿಂದ ಪೊಲೀಸರು ಕಾರಿನ ಮಾಲೀಕತ್ವದ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
Tamil Nadu | Man charred to death after a car exploded due to LPG cylinder blast in Ukkadam, Coimbatore, today morning. Body sent to Coimbatore Medical College for postmortem pic.twitter.com/wvTAbwcCLR
— ANI (@ANI) October 23, 2022
ಘಟನೆಯ ನಂತರ, ಕೊಟ್ಟೈ ಈಶ್ವರನ್ ದೇವಸ್ಥಾನದ ರಸ್ತೆಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳ ಪೊಲೀಸರು ಹಾಗೂ ಸ್ನಿಫರ್ ಡಾಗ್ಗಳನ್ನು ಕರೆಸಿ ಪರಿಶೀಲನೆ ನಡೆಸಲಾಗುತ್ತಿದೆ.
ಎರಡು ಸಿಲಿಂಡರ್ಗಳನ್ನು ಹೊಂದಿದ್ದ ಕಾರು ಚಲಿಸುತ್ತಿದ್ದ ವೇಳೆ ಸ್ಫೋಟಗೊಂಡಿದೆ. ಕಾರಿನಲ್ಲಿ ಯಾವುದೇ ಸುಡುವ ವಸ್ತುಗಳು ಇರಲಿಲ್ಲ. ಸಾವನ್ನಪ್ಪಿದ್ದ ವ್ಯಕ್ತಿ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಟಿಎನ್ಐಇಗೆ ತಿಳಿಸಿದ್ದಾರೆ.