ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಉಗ್ರರ ಅಟ್ಟಹಾಸ ಮೆರೆದಿದ್ದರು. ಇಂದು ನಡೆದಂತ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಕನ್ನಡಿಗನೊಬ್ಬ ಬಲಿಯಾಗಿರುವುದಾಗಿ ತಿಳಿದು ಬಂದಿದೆ.
ಶಿವಮೊಗ್ಗದ ವಿಜಯನಗರ ನಿವಾಸಿಯಾಗಿದ್ದಂತ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬುವರು ಪತ್ನಿ ಹಾಗೂ ಮಗನೊಂದಿಗೆ ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆಯಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು.
ಭಯೋತ್ಪಾದಕರು ನಡೆಸಿದಂತ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ವಿಜಯನಗರದ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರ ಪತ್ನಿ ಪಲ್ಲವಿ ಹಾಗೂ ಪುತ್ರ ಸುರಕ್ಷಿತವಾಗಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ
BIG UPDATE: ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ: ಇಬ್ಬರು ಸಾವು, 12 ಮಂದಿಗೆ ಗಾಯ