ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತವೊಂದು ಸಂಭವಿಸಿದೆ. ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೊಮ್ಮತ್ತಿ ಸಮೀಪ ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋ ಚಾಲಕ ರಾಘು ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಇನ್ನೂ ಆಟೋದಲ್ಲಿ ತೆರಳುತ್ತಿದ್ದಂತ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.