ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಮಾರಿಗೆ ಮತ್ತೊಂದು ಬಲಿಯಾಗಿದ್ದು, ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಚಿಕಿಇತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಕೊಡಗು ಜಿಲ್ಲೆಯ ಹೊಸಕೋಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ಮಾಡವುಮನೆ ರವಿ ಹಾಗೂ ಶಭಾ ದಂಪತಿ ಪುತ್ರ ವಂಶಿಕ್ ಮೃತ ಯುವಕ, ಜ್ವರದಿಂದ ಬಳಲುತ್ತಿದ್ದ ಯುವಕನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕಷೆ ನಡೆಸಿದಾಗ ಪ್ಲೇಟ್ ಲೆಟ್ ತೀರಾ ಕಮ್ಮಿಯಾಗಿರುವುದು ಕಂಡುಬಂದಿತ್ತು ಹೀಗಾಗಿ ವಂಶಿಕ್ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ರಾಜ್ಯದಲ್ಲಿ ನಿನ್ನೆ ಒಂದೇ ದಿನ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಿಂದ ತಿಳಿದು ಬಂದಿದೆ.