ಕಾರವಾರ: ಕಾಲೇಜು ಶುಲ್ಕ ಪಾವತಿಸಲು ತಂದೆ ಕೊಟ್ಟಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಸಕಾಲದಲ್ಲಿ ಮರಳಿ ನೀಡದ ಕಾರಣಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.
Get the latest creative news from FooBar about art, design and business.
ಕಾರವಾರ: ಕಾಲೇಜು ಶುಲ್ಕ ಪಾವತಿಸಲು ತಂದೆ ಕೊಟ್ಟಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಸಕಾಲದಲ್ಲಿ ಮರಳಿ ನೀಡದ ಕಾರಣಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ನಡೆದಿದೆ.
ಬೆಳಕೆ ಗ್ರಾಮದ ನಿವಾಸಿ ನಾಗರಾಜ ಲಚ್ಚಯ್ಯ ನಾಯ್ಕ ಅವರ ಪುತ್ರಿ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ವಿದ್ಯಾರ್ಥಿನಿ.
ಶುಲ್ಕದ ಹಣ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ: ಗಾಯತ್ರಿ ಅವರಿಗೆ ಕಾಲೇಜು ಶುಲ್ಕ ಪಾವತಿಸಲು ಅವರ ತಂದೆ 10 ಸಾವಿರ ರೂಪಾಯಿ ನೀಡಿದ್ದರು. ಇದೇ ವೇಳೆ ಊರಿನ ಪರಿಚಯಸ್ಥನಾದ ಸಂತೋಷ ಮಾಧೇದ ನಾಯ್ಕ ಎಂಬಾತ ತನಗೆ ತುರ್ತು ಅಗತ್ಯವಿದೆ ಎಂದು ಹೇಳಿ, ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ನಂಬಿಸಿ ಗಾಯತ್ರಿಯಿಂದ ಆ 10 ಸಾವಿರ ರೂಪಾಯಿಗಳನ್ನು ಸಾಲವಾಗಿ ಪಡೆದಿದ್ದನು.
ಹಾಲ್ ಟಿಕೆಟ್ ಸಿಗದೆ ನಿರಾಶೆ: ಆದರೆ ಹಣ ಪಡೆದ ಸಂತೋಷ್, ಹೇಳಿದ ಸಮಯ ಮುಗಿದರೂ ವಿದ್ಯಾರ್ಥಿನಿಗೆ ಹಣವನ್ನು ಮರಳಿ ಕೊಟ್ಟಿರಲಿಲ್ಲ. ಇದರಿಂದಾಗಿ ಗಾಯತ್ರಿಗೆ ಕಾಲೇಜಿನ ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಶುಲ್ಕ ಪಾವತಿಸದ ಕಾರಣ ಕಾಲೇಜಿನಿಂದ ಆಕೆಗೆ ಪರೀಕ್ಷೆಯ ಹಾಲ್ಟಿಕೆಟ್ ಕೂಡ ಸಿಕ್ಕಿರಲಿಲ್ಲ ಎನ್ನಲಾಗಿದೆ.
ಬಾವಿಗೆ ಹಾರಿ ಆತ್ಮಹತ್ಯೆ: ತಂದೆ ಕೊಟ್ಟ ಹಣವೂ ಇಲ್ಲದೆ, ಇತ್ತ ಪರೀಕ್ಷೆ ಬರೆಯಲು ಹಾಲ್ಟಿಕೆಟ್ ಕೂಡ ಸಿಗದೇ ಹೋದಾಗ ತೀವ್ರ ಮನನೊಂದ ವಿದ್ಯಾರ್ಥಿನಿ ಗಾಯತ್ರಿ, ಗ್ರಾಮದ ಬಾವಿಗೆ ಹಾರಿ ತನ್ನ ಜೀವನ ಕೊನೆಗಾಣಿಸಿಕೊಂಡಿದ್ದಾಳೆ.
ಪೊಲೀಸ್ ತನಿಖೆ: ಘಟನೆಗೆ ಸಂಬಂಧಿಸಿದಂತೆ ಸದ್ಯ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.