ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಬಟಗುಂಡ್ನಲ್ಲಿ ಸೇನಾ ವಾಹನವೊಂದು ಪಲ್ಟಿಯಾದ ಪರಿಣಾಮ ಕನಿಷ್ಠ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಚಾಲಕನು ವಾಹನದ ಮೇಲೆ ನಿಯಂತ್ರಣ ಕಳೆದುಕೊಡ ವೇಳೇಯಲ್ಲಿ ವಾಹನ ಕೆಳಗೆ ಜಾರಿದಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡ ಭದ್ರತಾ ಅಧಿಕಾರಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ.