ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶಾಲಾ ವಾಹನವೊಂದು ಪಲ್ಟಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ವಾಹನವೊಂದು ಕೈಮರ ಚೆಕ್ ಪೋಸ್ಟ್ ಬಳಿಯಲ್ಲಿ ಮುಂದಿನ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ವಾಹನದಲ್ಲಿದ್ದಂತ ಓರ್ವ ಶಿಕ್ಷಕ, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಗಾಯಾಳು ಶಿಕ್ಷಕರು, ವಿದ್ಯಾರ್ಥಿಗಳನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಪಘಾತಗೊಂಡ ಖಾಸಗಿ ವಾಹನದಲ್ಲಿ 50 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು ಎಂಬುದಾಗಿ ತಿಳಿದು ಬಂದಿದೆ. ಮೈಸೂರಿನ ಗೋಪಾಲಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ, ನಾವು ತಕರಾರು ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!