ಯಾದಗಿರಿ: ಜಿಲ್ಲೆಯಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಡಲಾಗಿತ್ತು. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದಂತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಓರ್ವ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 25-03-2024ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು(ಬಾಲಕರ) ಹುಣಸಗಿ ತಾಲೂಕು, ಸುರಪುರದಲ್ಲಿ ನಡೆಯುತ್ತಿದ್ದಂತ ಎಸ್ ಎಸ್ ಎಲ್ ಸಿ ಪ್ರಥಮ ಭಾಷೆ ಪರೀಕ್ಷೆಯ ವೇಳೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯ್ತಿ ಯಾದಗಿರಿ ವೆಬ್ ಕಾಸ್ಟಿಂಗ್ ಸಿಸಿ ಕ್ಯಾಮರಾ ವೀಕ್ಷಣೆ ಮಾಡಿದಾಗ, ಕೊಠಡಿ ಸಂಖ್ಯೆ-2ರ ಕೋಣೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಕಂಡು ಬಂದಿರುತ್ತದೆ ಎಂದಿದ್ದಾರೆ.
ಈ ಕೊಠಡಿಯ ಮೇಲ್ವಿಚಾರಕರಾಗಿದ್ದಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಏವೂರದ ಸಹ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅವರು ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಕಂಡು ಬಂದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಅಲ್ಲದೇ ಮುಖ್ಯ ಅಧೀಕ್ಷಕರ ಗಮನಕ್ಕೂ ತಂದಿರುವುದಿಲ್ಲ. ಈ ಹಿನ್ನಲೆಯಲ್ಲಿ ಇವರ ಮೇಲೆ ಸೂಕ್ತ ಕ್ರಮ ವಹಿಸಲು ಸಿಇಓ ಸೂಚಿಸಿರುತ್ತಾರೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಯಾದಗಿರಿಯ ಉಪ ನಿರ್ದೇಶಕರಾದಂತ ಮಂಜುನಾಥ್ ಹೆಚ್.ಟಿ ಅವರು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಕಾರಣವಾದಂತ ಸಹ ಶಿಕ್ಷಕ ಸಾಹೇಬಗೌಡ ಉಕ್ಕಾಲಿ ಅವರನ್ನು ಈ ತಕ್ಷಣದಿಂದ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಬೆಂಗಳೂರು : ಖಾಸಗಿ ರೆಸಾರ್ಟ್ ನಲ್ಲಿ ‘ರೈನ್ ಡಾನ್ಸ್’ ಆಯೋಜನೆ : ಜಲಮಂಡಳಿ ಆದೇಶಕ್ಕೆ ಡೋಂಟ್ ಕೇರ್ ಎಂದ ಜನ
BREAKING : ಮಂಡ್ಯದಲ್ಲಿ ‘ಪಟಾಕಿ’ ತುಂಬುವ ವೇಳೆ ಭೀಕರ ಸ್ಪೋಟ : ಓರ್ವ ಕಾರ್ಮಿಕ ದುರ್ಮರಣ