Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಒಂದು ಬಾರಿಗೆ ನೇರ ನೇಮಕಾತಿಗೆ ನಿಗದಿ ಪಡಿಸಿದ ವಯೋಮಿತಿ 2 ವರ್ಷ ಸಡಿಲಿಕೆ: ರಾಜ್ಯ ಸರ್ಕಾರ ಅಧಿಕೃತ ಆದೇಶ
KARNATAKA

BIG NEWS: ಒಂದು ಬಾರಿಗೆ ನೇರ ನೇಮಕಾತಿಗೆ ನಿಗದಿ ಪಡಿಸಿದ ವಯೋಮಿತಿ 2 ವರ್ಷ ಸಡಿಲಿಕೆ: ರಾಜ್ಯ ಸರ್ಕಾರ ಅಧಿಕೃತ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಎಲ್ಲಾ ಅಭ್ಯರ್ಥಿಗಳಿಗೆ ನೇರ ನೇಮಕಾತಿಗೆ ನಿಗದಿ ಪಡಿಸಿರುವ ವಯೋಮಿತಿಯನ್ನು ಒಂದು ಬಾರಿಗೆ 2 ವರ್ಷ ಸಡಿಲಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. 

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ದಿನಾಂಕ:06.09.2025ರಲ್ಲಿ ಸರ್ಕಾರದ ಆದೇಶ ದಿನಾಂಕ:31,12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗಧಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 02 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಿದ ಎಂದು ತಿಳಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ.?

ದಿನಾಂಕ 25.11.2024ರ, ದಿನಾಂಕ 29.03.2025ರ ಮತ್ತು ದಿನಾಂಕ 11.04.2025ರ ಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ನಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ದಿನಾಂಕ: 28-10-2024 ರಿಂದ ಮುಂದಿನ ಆದೇಶದವರೆವಿಗೂ ಹೊರಡಿಸಬಾರದಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿರುತ್ತದೆ.

ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪುವರ್ಗಗಳ ಬದಲಾಗಿ ಪವರ್ಗ-ಎ, ಪವರ್ಗ-ಬಿ ಮತ್ತು ಪುವರ್ಗ-ಸಿ ಎಂದು 3 ಪವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪವರ್ಗ-ಬ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಮ ನಿಗದಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ. ಮುಂದುವರೆದು, ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತದೆ.

ಮೇಲ್ಕಂಡ ಹಿನ್ನಲೆಯಲ್ಲಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ನೀಡಲು ತೀರ್ಮಾನಿಸಿ, ಈ ಕಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.