ಬಾಗಲಕೋಟೆ: ಜಿಲ್ಲೆಯಲ್ಲಿ ರೈಲ್ವೆ ಅಂಡರ್ ಪಾಸ್ ಕಾಮಗಾರಿಯ ತಡೆಗೋಡೆ ನಿರ್ಮಿಸುತ್ತಿದ್ದಂತ ಸಂದರ್ಭದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ಬಾಗಲಕೋಟೆ ತಾಲ್ಲೂಕಿನ ಮುಗಳೊಳ್ಳಿ ಗ್ರಾಮದ ಬಳಿಯಲ್ಲಿ ರೈಲ್ವೆ ಅಂಡರ್ ಪಾಸ್ ತಡೆಗೋಡೆ ನಿರ್ಮಿಸುತ್ತಿದ್ದಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಬಾಗಲಕೋಟೆಯ ನಿಡಗುಂದಿ ಗ್ರಾಮದ ಕಾರ್ಮಿಕ ರುದ್ರೇಶ್ ನಿಡಗುಂದಿ(41) ಎಂಬ ಕಾರ್ಮಿಕ ಸಾವನ್ನಪ್ಪಿದ್ದಾನೆ. ಜೆಸಿಬಿ ಮೂಲಕ ಕಾರ್ಮಿಕ ರುದ್ರೇಶ್ ಶವ ಹೊರತೆಗೆಯಲಾಗಿದೆ. ಕಾರ್ಮಿಕರಾದಂತ ವಾಲಿಕಾರ, ಭೀಮತಿ ಮಾದರಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
CRIME NEWS: ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿ ಬೀಗ ಮುರಿದು ಕಳವು
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!