ಬಳ್ಳಾರಿ: ಜಿಲ್ಲೆಯಲ್ಲಿ ಬಿಸ್ಕೇಟ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಪೋಟಗೊಂಡು ಓರ್ವ ಕಾರ್ಮಿಕ ದುರ್ಮಣರ ಹೊಂದಿ, ಮತ್ತೆ ಐವರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಬಳ್ಳಾರಿಯಲ್ಲಿನ ಭರತ್ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ದಿಢೀರ್ ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಕಾರ್ಮಿಕ ಸಲೀಂ ಎಂಬುವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ.
ಇನ್ನೂ ಈ ದುರ್ಘಟನೆಯಲ್ಲಿ ಐವರು ಕಾರ್ಮಿಕರು ಕೂಡ ಗಾಯಗೊಂಡಿದ್ದು, ಇವರಲ್ಲಿ ಓರ್ವ ಕಾರ್ಮಿಕನ ಸ್ಥಿತಿ ಚಿಂತಾಜನಕ ಅಂತ ಹೇಳಲಾಗುತ್ತಿದೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಭರತ್ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟಕ್ಕೆ ಕಾರಣ ಏನು ಅಂತ ತಿಳಿದು ಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಬಳ್ಳಾರಿ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದಾವಣಗೆರೆ: ‘ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳ’ನ ಯಶಸ್ಸಿಗೆ ಟೊಂಕಕಟ್ಟಿ ನಿಲ್ಲಿ- ಶಿವಾನಂದ ತಗಡೂರು ಕರೆ
BREAKING: ಮಣಿಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಅದ್ಧೂರಿ ಚಾಲನೆ