ಬೆಂಗಳೂರು : ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು.
ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮೀಟ್ ದ ಪ್ರೆಸ್ ನಲ್ಲಿ ಮಾತನಾಡಿದರು.
ವಿಜಯೇಂದ್ರ, ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 56274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್ ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.
ನೀರಾವರಿಗೆ 16360 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 18198 ಕೋಟಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲಾ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.
ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.
ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲೀಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿದೆ. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದರು.
ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ ಎಂದರು.
ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ ಎಂದು ವಿವರಿಸಿದರು.
ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ವಿವರಿಸಿದರು.
ಮುಖ್ಯಮಂತ್ರಿಗಳ ಮಾತಿನ ಇತರೆ ಹೈಲೈಟ್ಸ್
ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ
ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ
ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದರು
ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಖಾತೆಗೆ ಹಣ ಜಮೆ
ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲೀಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿದೆ. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದರು
ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 40% ತನಿಖೆಗೆ ಶುರು ಮಾಡಿಸಿದ್ದೇವೆ.
ದೇವಸ್ಥಾನಗಳ ಹಣ ಕಿತ್ತುಕೊಳ್ಳುತ್ತಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಿದರು. ಆದರೆ ಗ್ರಾಮೀಣ ಭಾಗದ ದೇವಸ್ಥಾನಗಳ ಅಭಿವೃದ್ಧಿಗೆ ನಾವು ಮುಂದಾಗಿದ್ದೇವೆ ಎನ್ನುವ ಸತ್ಯ ಮರೆಮಾಚಿ ಅಪಪ್ರಚಾರ ಮಾಡುತ್ತಿದ್ದಾರೆ
ಜಾತಿಗಣತಿ ವರದಿ ಸ್ವೀಕರಿಸಬೇಡಿ ಎಂದು ಒತ್ತಡ ಹೇರಿದರು. ಆದರೆ, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಮೌಲ್ಯ ಕಾಪಾಡಲು ವರದಿ ಸ್ವೀಕರಿಸಿದೆವು
ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರನ್ನು ಪತ್ತೆ ಹಚ್ಚಲು ಜಾತಿ ಗಣತಿ,ಸಾಮಾಜಿಕ ಆರ್ಥಿಕ ಸಮೀಕ್ಷೆ ಅತ್ಯಗತ್ಯ. ಹೀಗಾಗಿಯೇ ನಾವು ಜಾತಿಗಣತಿ ಮಾಡಿಸಿ ವರದಿ ಸ್ವೀಕರಿಸಿದೆವು. ಈ ವರದಿ ಯಾವುದೇ ಸಮುದಾಯಕ್ಕೂ ತೊಂದರೆ ಮಾಡುವುದಿಲ್ಲ
ಮೋದಿ ಆರ್ಥಿಕವಾಗಿ ಹಿಂದುಳಿದವರಿಗಾಗಿ EWS ಮೀಸಲಾತಿ ಜಾರಿತಂದರು. ಇಡೀ ದೇಶದಲ್ಲಿ ಮೀಸಲಾತಿಯ ಅನುಕೂಲ ಪಡೆಯದ ಯಾವುದೇ ಜಾತಿ, ವರ್ಗಗಳಿಲ್ಲ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರ ಮಟ್ಟದಲ್ಲಿ ಜಾತಿ ಗಣತಿ ಮಾಡುತ್ತೇವೆ ಎಂದು ಘೋಷಿಸಿದ್ದು ಇದೇ ಕಾರಣಕ್ಕೆ. ಇದರಲ್ಲಿ ಏನು ತಪ್ಪಿದೆ ಎಂದು ಸಿಎಂ ಪ್ರಶ್ನಿಸಿದರು
52009 ಕೋಟಿ ಮುಂದಿನ ವರ್ಷದ ಗ್ಯಾರಂಟಿಗಳ ಅಭಿವೃದ್ಧಿಗೆ ಹಣ ಮೀಸಲಿಟ್ಟಿದ್ದೇವೆ. ಇದಕ್ಕಿಂತ ಹೆಚ್ಚು ಹಣ ಕೊಡ್ತೀವಿ ಎಂದರು
ಅಭಿವೃದ್ಧಿಗೆ ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ಹೆಚ್ವು ಹಣ ಖರ್ಚು ಮಾಡಿದ್ದೇವೆ ಎಂದರು
ಬೊಮ್ಮಾಯಿ ಬಜೆಟ್ ಗಾತ್ರಕ್ಕಿಂತ ನಮ್ಮ ಸರ್ಕಾರದ ಬಜೆಟ್ ಗಾತ್ರ ಹೆಚ್ಚಾಗಿದೆ. ನಮ್ಮ ಸರ್ಕಾರ ಪಾಪರ್ ಆಗಿದ್ದರೆ ಇದು ಸಾಧ್ಯವಿತ್ತಾ ಎಂದು ಬಿ.ಎಸ್.ಯಡಿಯೂರಪ್ಪ ಅವರ ಆರೋಪಗಳಿಗೆ ಸವಾಲು ಎಸೆದರು
ನುಡಿದಂತೆ ನಡೆದು 7.5 ಕೋಟಿ ಜನರ ಆಶಯ ಈಡೇರಿಸಿದ್ದೇವೆ. ನಮಗೆ ಆಶೀರ್ವಾದ ಮಾಡಿ ಬಹುಮತದಿಂದ ಗೆಲ್ಲಿಸಿದ ಜನತೆಗೆ ಸಿಎಂ ಅಭಿನಂದನೆ ಸಲ್ಲಿಸಿದರು
ಕಾನೂನು ಸುವ್ಯವಸ್ಥೆ ಕುರಿತಾದ ಪ್ರಶ್ನೆಗೆ ಉತ್ತರ
ನೇಹಾ ಕೊಲೆ ಪ್ರಕರಣದ ಆರೋಪಿ ಬಂಧಿತನಾಗಿ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಆಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಕೊಲೆ ಗಳ ಪ್ರಮಾಣ ಕಡಿಮೆ ಆಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ಆದರೆ ಅಂಕಿ ಅಂಶಗಳಿಗಿಂತ ಸಮಾಜದ ಸ್ವಾಸ್ಥ್ಯ ಮುಖ್ಯ. ಹೀಗಾಗಿ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟಲು ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇವೆ.
ಕರ್ತವ್ಯಲೋಪ ಮಾಡಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಾಗಿದೆ
NDA ಕೂಡ ಒಕ್ಕೂಟ ತಾನೆ
ಕಾಂಗ್ರೆಸ್ ಸಣ್ಣ ಪುಟ್ಟ ಪಕ್ಷಗಳ ಜೊತೆ ಒಕ್ಕೂಟ ರಚಿಸಿಕೊಂಡಿದೆ ಎನ್ನುವ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, NDA ಕೂಡ ಒಕ್ಕೂಟವೇ ಆಗಿದೆ. ಅವರು ಇತರೆ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ನಾವು ಮಾಡಿಕೊಳ್ಳಬಾರದು ಎಂದರೆ ಹೇಗೆ ಎಂದು ಪ್ರಶ್ನಿಸಿದರು*
ಜಾತಿ ಗಣತಿ ಜಾರಿ ಹೇಗೆ ಎನ್ನುವ ಪ್ರಶ್ನೆಗೆ
ನಾವು ಜಾತಿಗಣತಿ ವರದಿ ಸ್ವೀಕರಿಸಿದ್ದೇವೆ. ನಾವಿನ್ನೂ ವರದಿ ನೋಡಿಲ್ಲ. ಕ್ಯಾಬಿನೆಟ್ ಮುಂದೆ ಇಡ್ತೇವೆ
ಬರ ಪರಿಹಾರಕ್ಕೆ ಕೇಂದ್ರದ ದ್ರೋಹ
ರಾಜ್ಯ ಭೀಕರ ಪರಿಹಾರಕ್ಕೆ ತುತ್ತಾದಾಗಲೂ ರಾಜ್ಯದ ಪಾಲಿನ ಬರ ಪರಿಹಾರವನ್ನು ಕೇಂದ್ರ ಕೊಡಲಿಲ್ಲ. ನಾವು ನಮ್ಮ ಪಾಲು ಕೇಳಲು ಪದೇ ಪದೇ ಕೇಂದ್ರಕ್ಕೆ ಹೋಗಿ ಮನವಿ ಮಾಡಿದರೂ ಕೊಡಲಿಲ್ಲ. ನಾನೇ ಪ್ರಧಾನಿ ಮತ್ತು ಅಮಿತ್ ಶಾ ಅವರಿಗೆ ಮನವಿ ಕೊಟ್ಟೆ. ಆದರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಯಿತು.
ಆಮೇಲೆ ಅಮಿತ್ ಶಾ, ಮೋದಿ, ನಿರ್ಮಲಾ ಸೀತಾರಾಮನ್ ಪದೇ ಪದೇ ರಾಜ್ಯಕ್ಕೆ ಬಂದು ಜನರಿಗೆ ಸುಳ್ಳು ಹೇಳಿದರು. ಆದರೆ, ಸುಪ್ರೀಂಕೋರ್ಟ್ ಎದುರು ಮಾತ್ರ ಎರಡು ವಾರ ಸಮಯ ಕೇಳಿದರು. ಸುಪ್ರೀಂಕೋರ್ಟ್ ಗಟ್ಟಿಯಾಗಿ ಹೇಳಿದ ಬಳಿಕ ನಾವು ಕೇಳಿದ್ದರಲ್ಲಿ 19% ಮಾತ್ರ ಪರಿಹಾರ ಕೊಟ್ಟಿದ್ದಾರೆ. ನಾವು ಬಾಕಿ ಪರಿಹಾರಕ್ಕಾಗಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದರು.
ಕೇಂದ್ರದ ಅಸಹಕಾರದ ನಡುವೆಯೂ ನಾವು ರಾಜ್ಯದ ಜನತೆಯ ಕೈ ಬಿಡಲಿಲ್ಲ. ಪರಿಹಾರ ಕೊಟ್ಟೆವು.
ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸ್ಪಷ್ಟ ಸೂಚನೆ ನೀಡಿದ್ದೇನೆ. ರೈತರಿಗೆ ಮಾತ್ರ ಪರಿಹಾರದ ಹಣ ಮೀಸಲಿಟ್ಟಿದ್ದೇವೆ ಎಂದರು.
ಪೆನ್ ಡ್ರೈವ್ ಪ್ರಕರಣದ ಆರೋಪಕ್ಕೆ ಉತ್ತರ
ಬಿಜೆಪಿಯ ದೇವರಾಜೇಗೌಡ ಅವರೇ ಮೊದಲಿಗೆ ಪತ್ರಿಕಾಗೋಷ್ಠಿ ನಡೆಸಿದ್ದರು. ಅತ್ಯಾಚಾರಕ್ಕೆ ಒಳಗಾದವರು ದೂರು ಕೊಟ್ಟರು. ಆರು ತಿಂಗಳ ಮೊದಲೇ ಬಿಜೆಪಿಗೆ ವಿಷಯ ಗೊತ್ತಿತ್ತು. ಆದರೂ ಬಿಜೆಪಿ ಪ್ರಜ್ವಲ್ ಗೆ NDA ಟಿಕೆಟ್ ನೀಡಿತು. ಮೋದಿ ಬಂದು ಪ್ರಜ್ವಲ್ ಗೆಲ್ಲಿಸಲು ಭಾಷಣ ಮಾಡಿದರು.
ನೀವು ಪ್ರಧಾನ ಮಂತ್ರಿ ಆಗ್ತೀರಾ ಪ್ರಶ್ನೆಗೆ ಉತ್ತರ
ದೇಶದಲ್ಲಿ ಗುಜರಾತ್ ಮಾದರಿಯೇ ಇಲ್ಲ. ಅದು ಸುಳ್ಳು ಎನ್ನುವುದು ಸಾಬೀತಾಗಿದೆ. ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ, ಜಾರಿ ಮಾಡಿದ್ದರಿಂದ ದೇಶದಲ್ಲಿ ಕರ್ನಾಟಕ ಮಾಡೆಲ್ ಜಾರಿಯಲ್ಲಿದೆ. ಕೆಂದ್ರದಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು ನಮ್ಮ ಕಾರ್ಯಕ್ರಮಗಳ ಜಾರಿ ಆಧಾರದಲ್ಲಿ ಚರ್ಚಿಸಿ ಪ್ರಧಾನಮಂತ್ರಿ ಯಾರಾಗಬೇಕು ಎನ್ನುವುದನ್ನು ನಿರ್ಧರಿಸುತ್ತೇವೆ.
2023ನೇ ಮೇ 20 ರಂದು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪ್ರಮುಖ ಸಾಧನೆಗಳು
ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ನಡೆಸಿದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಮುಂದಿನ ಎಂಟು ತಿಂಗಳ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತು ಮಾಡಿತು.
ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವ ನಿಧಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ 1.2 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅನುಕೂಲ ಕಲ್ಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ 36000 ಕೋಟಿ ರೂ. ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಲಾಗಿದೆ. 2024-25 ನೇ ಸಾಲಿಗೆ 52,009 ಕೋಟಿ ರೂ. ಒದಗಿಸಲಾಗಿದೆ.
ಶಕ್ತಿ ಯೋಜನೆಯಡಿ ಏಪ್ರಿಲ್ ಅಂತ್ಯದ ವರೆಗೆ 201.32 ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಪ್ರಯಾಣ ಸೌಲಭ್ಯ ಪಡೆದುಕೊಂಡಿದ್ದು, ಇದಕ್ಕಾಗಿ 4857.95 ಕೋಟಿ ರೂ. ವೆಚ್ಚ ಭರಿಸಲಾಗಿದೆ.
ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ಪ್ರತಿ ಫಲಾನುಭವಿಗೆ 170 ರೂ. ಗಳಂತೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ಈ ವರೆಗೆ 5754.6 ಕೋಟಿ ರೂ. ಮೊತ್ತವನ್ನು 4,09,34,896 ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ.
ಗೃಹ ಜ್ಯೋತಿ ಯೋಜನೆಯಡಿ 1.67 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, 1.60 ಕೋಟಿ ಜನರಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ. ಈ ಯೋಜನೆಯಡಿ 7436 ಕೋಟಿ ರೂ. ವೆಚ್ಚ ಭರಿಸಲಾಗಿದೆ..
ಗೃಹ ಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000/- ರೂ. ನಂತೆ ಒಟ್ಟು 1.2 ಕೋಟಿ ಮಹಿಳೆಯರಿಗೆ __ 20293.49 ಕೋಟಿ ರೂ. ವರ್ಗಾಯಿಸಲಾಗಿದೆ.
ಯುವ ನಿಧಿ ಯೋಜನೆಯಡಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವೀಧರರಾದ ನಿರುದ್ಯೋಗಿ ಯುವಕ ಯುವತಿಯರಿಗೆ ಮಾಸಿಕ 3,000 ಹಾಗೂ ಡಿಪ್ಲೊಮಾ ಪಡೆದವರಿಗೆ 1500 ರೂ. ನಂತೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಇಲ್ಲಿಯವರೆಗೆ, 1.53.255 ಅಭ್ಯರ್ಥಿಗಳು ನೋಂದಾಯಿಸಿಕೊಂಡಿರುತ್ತಾರೆ ಮತ್ತು ನೇರ ನಗದು ವರ್ಗಾವಣೆ (DBT) ಮೂಲಕ 29,587 ಅರ್ಹ ಅಭ್ಯರ್ಥಿಗಳಿಗೆ ಭತ್ಯೆಯನ್ನು ವಿತರಿಸಲಾಗಿದೆ.ಯಾವುದೇ ಜಾತಿ, ಮತ, ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಸಮ ಸಮಾಜ ನಿರ್ಮಾಣಕ್ಕಾಗಿ ಶಿಕ್ಷಣ ಹಾಗೂ ಉದ್ಯೋಗ ಸೃಜನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಆರೋಗ್ಯ ಸೇವೆಯನ್ನು ಇನ್ನಷ್ಟು ಉತ್ತಮ ಪಡಿಸಲು ಆದ್ಯತೆ ನೀಡಿದೆ.
- ಕೃಷಿ ಭಾಗ್ಯ: ಸರ್ಕಾರದ ಹಿಂದಿನ ಅವಧಿಯಲ್ಲಿ ಜನಪ್ರಿಯವಾಗಿದ್ದ ʼಕೃಷಿ ಭಾಗ್ಯʼ ಯೋಜನೆಯನ್ನು ಮರುಜಾರಿ ಮಾಡಲಾಗಿದೆ. ಮಳೆಯಾಶ್ರಿತ ಕೃಷಿ ನೀತಿ 2014ರ ಅನ್ವಯ ರಾಜ್ಯದ 24 ಬರ ಪೀಡಿತ ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ ಪ್ಯಾಕೇಜ್ ಮಾದರಿಯಲ್ಲಿ 6601 ಕೃಷಿ ಹೊಂಡ ಹಾಗೂ ಪೂರಕ ಘಟಕಗಳೊಂದಿಗೆ ಅನುಷ್ಠಾನಗೊಳಿಸಲಾಗಿದೆ. ಇದಕ್ಕಾಗಿ 49.90 ಕೋಟಿ ರೂ. ವೆಚ್ಚ ಭರಿಸಲಾಗಿದೆ.
- ಕೃಷಿ ಯಾಂತ್ರೀಕರಣ, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಹೈಟೆಕ್ ಹಾರ್ವೆಸ್ಟರ್ ಹಬ್ ರಾಜ್ಯದಲ್ಲಿ 3.53 ಲಕ್ಷ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣಗಳ ಮತ್ತು ಕೃಷಿ ಸಂಸ್ಕರಣಾ ಘಟಕಗಳಿಗೆ 69.22 ಕೋಟಿ ರೂ. ಸಹಾಯಧನ ಒದಗಿಸಲಾಗಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ 41.38 ಕೋಟಿ ರೂ. ಒದಗಿಸಲಾಗಿದೆ.
- ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ: 2023ರ ಮುಂಗಾರು ಹಂಗಾಮಿನಲ್ಲಿ 19.14 ಲಕ್ಷ ರೈತರ ಪ್ರಸ್ತಾವನೆಗಳು 15.09 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, ಇಲ್ಲಿಯವರೆಗೆ 12.86 ಲಕ್ಷ ರೈತ ಫಲಾನುಭವಿಗಳಿಗೆ 1473.41 ಕೋಟಿ ರೂ. ಬೆಳೆ ವಿಮೆ ಪರಿಹಾರ ಇತ್ಯರ್ಥಪಡಿಸಲಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದೆ.
- ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮೇವಿನ ಕೊರತೆಯಾಗದಂತೆ ತಡೆಯಲು ಎಸ್.ಡಿ.ಆರ್. ಎಫ್. ನಿಂದ ಬಿಡುಗಡೆಯಾದ 20 ಕೋಟಿ ರೂ. ವೆಚ್ಚದಲ್ಲಿ 5.02 ಲಕ್ಷ ರೈತರಿಗೆ 7.63 ಲಕ್ಷ ಮೇವಿನ ಬೀಜದ ಮಿನಿ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ.
- ಅಮೃತ ಸ್ವಾಭಿಮಾನ ಕುರಿಗಾಹಿ ಯೋಜನೆಯಡಿ 20+1 ಕುರಿ/ ಮೇಕೆ ಘಟಕಗಳನ್ನು ವಿತರಿಸಲು ಕ್ರಮ ವಹಿಸಲಾಗಿದೆ. 6650 ಫಲಾನುಭವಿಗಳಿಗೆ 87.28 ಕೋಟಿ ರೂ. ಅನುದಾನ ವಿತರಿಸಲಾಗಿದೆ.
- ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೂತನ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಲೋಕಾರ್ಪಣೆಗೊಳಿಸಲಾಗಿದೆ.
- 2023-24 ನೇ ಸಾಲಿನಲ್ಲಿ 29.06 ಲಕ್ಷ ರೈತರಿಗೆ 23,292 ಕೋಟಿ ರೂ. ಬೆಳೆ ಸಾಲ ವಿತರಣೆ ಮಾಡಲಾಗಿದೆ.
- ಬೆಳೆ ಸಾಲಕ್ಕಾಗಿ ಬಡ್ಡಿ ಸಹಾಯಧನ ಯೋಜನೆಯಡಿ 30.37 ಲಕ್ಷ ರೈತರಿಗೆ 1178 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
- ಸ್ವಸಹಾಯ ಗುಂಪುಗಳ ಬಡ್ಡಿ ಸಹಾಯಧನ ಯೋಜನೆಯಡಿ 61,525 ಸ್ವಸಹಾಯ ಗುಂಪುಗಳಿಗೆ 99 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಲಾಗಿದೆ.
- ಯಶಸ್ವಿನಿ ಯೋಜನೆಯಡಿ 1-1-2024 ರಿಂದ ಈ ವರೆಗೆ 41 ಲಕ್ಷ ಸದಸ್ಯರು ನೋಂದಾಯಿಸಿಕೊಂಡಿದ್ದು, ಏಪ್ರಿಲ್ 1 ರಿಂದ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ.
ಜಲ ಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ)
- 2023-24ನೇ ಸಾಲಿನ ಆಯವ್ಯಯದಲ್ಲಿ ಜಲ ಸಂಪನ್ಮೂಲ ಇಲಾಖೆಗೆ (ಭಾರಿ ಮತ್ತು ಮಧ್ಯಮ ನೀರಾವರಿ) ಒಟ್ಟು ರೂ.10 ಕೋಟಿ ಅನುದಾನ ಒದಗಿಸಲಾಗಿದೆ. ಮಾರ್ಚ್-2024 ರ ಅಂತ್ಯಕ್ಕೆ Rs.18198.84 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಮತ್ತು ಹೊಸದಾಗಿ 53824.49 ಎಕರೆ (21782 ಹೆಕ್ಟೇರ್) ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗಿದೆ.
- ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ: ಈ ಯೋಜನೆಯಡಿ ಮಾರ್ಚ್-2023 ರಿಂದ ಏಪ್ರಿಲ್-2024ರ ಅವಧಿಯಲ್ಲಿ ಒಟ್ಟು ರೂ.78 ಕೋಟಿ ಮೊತ್ತದ ವೆಚ್ಚ ಭರಿಸಲಾಗಿದೆ.
- ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3:
- ಉತ್ತರ ಕರ್ನಾಟಕದ ಪ್ರತಿಷ್ಠಿತ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿಯ ಯೋಜನಾ ಕಾಮಗಾರಿಗಳನ್ನು ತ್ವರಿತಗೊಳಿಸುವುದರ ಜೊತೆಗೆ ಭೂಸ್ವಾಧೀನ ಮತ್ತು ಪುನರ್ ನಿರ್ಮಾಣ & ಪುನರ್ ವಸತಿ ಪ್ರಕ್ರಿಯೆಗೆ ಆದ್ಯತೆ ನೀಡಲಾಗಿದೆ. ಯೋಜನೆಯಡಿ ಮಾರ್ಚ್-2023 ರಿಂದ ಏಪ್ರಿಲ್-2024ರ ಅವಧಿಯಲ್ಲಿ ಒಟ್ಟು ರೂ.48 ಕೋಟಿ ಮೊತ್ತದ ವೆಚ್ಚ ಭರಿಸಲಾಗಿದ್ದು, 14,650 ಹೆಕ್ಟೇರ್ Outlet ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ.
ಆರೋಗ್ಯ
- ರಾಜ್ಯದಲ್ಲಿ ಅಪೌಷ್ಟಿಕತೆ ಮತ್ತು ಅನೀಮಿಯಾ ನಿವಾರಣೆಗಾಗಿ 185.74 ಕೋಟಿ ರೂ. ವೆಚ್ಚದಲ್ಲಿ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 6 ರಿಂದ 59 ತಿಂಗಳ 52 ಲಕ್ಷ ಮಕ್ಕಳು, 5-9 ವರ್ಷದೊಳಗಿನ 58 ಲಕ್ಷ ಮಕ್ಕಳು, 10 ರಿಂದ 19 ವರ್ಷದೊಳಗಿನ 1.27 ಕೋಟಿ ಹದಿಹರೆಯದವರು, 12 ಲಕ್ಷ ಗರ್ಭಿಣಿಯರು, 11 ಲಕ್ಷ ಬಾಣಂತಿಯರು ಮತ್ತು ಸಂತಾನೋತ್ಪತ್ತಿ ವಯಸ್ಸಿನ 1.33 ಕೋಟಿ ಮಹಿಳೆಯರನ್ನು ತಲುಪುವ ಗುರಿಯನ್ನು ಸರ್ಕಾರ ಹೊಂದಿದೆ.
- ಈ ಯೋಜನೆಯಡಿ ರಾಜ್ಯದ ಸರ್ಕಾರಿ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜಿನ 1೦.76 ಲಕ್ಷ ಮಕ್ಕಳಿಗೆ ರಕ್ತ ಪರೀಕ್ಷೆ ಮಾಡಲಾಗಿದ್ದು, ಒಟ್ಟು 3.51 ಲಕ್ಷ ಮಕ್ಕಳಿಗೆ ಅನೀಮಿಯ ಇರುವುದನ್ನು ಗುರುತಿಸಲಾಗಿದೆ. ಇದರಲ್ಲಿ 1.76 ಲಕ್ಷ ಮಕ್ಕಳಿಗೆ mild ಅನೀಮಿಯ, 1.62 ಲಕ್ಷ ಮಕ್ಕಳಿಗೆ Moderate ಅನೀಮಿಯ ಹಾಗೂ 13,648 ಮಕ್ಕಳಿಗೆ ತೀವ್ರ ಪ್ರಮಾಣದ ಅನೀಮಿಯ ಇರುವುದನ್ನು ಪತ್ತೆ ಹಚ್ಚಲಾಗಿದ್ದು, ರಕ್ತ ಹೀನತೆಗೆ ಚಿಕಿತ್ಸೆ ನೀಡಲಾಗುತ್ತಿದೆ.
- ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಹೃದಯದ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆ (ST Elevated Myocardial Infraction- STEMI) ಯನ್ನು ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ಸಹಯೋಗದಲ್ಲಿ 15 ಜಿಲ್ಲೆಗಳ 45 ಆಸ್ಪತ್ರೆಗಳಲ್ಲಿ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 1.01 ಲಕ್ಷ ರೋಗಿಗಳ ECG ತೆಗೆಯಲಾಗಿದ್ದು, 1550 ಹೃದ್ರೋಗಿಗಳಿಗೆ ಜಯದೇವ ಸಂಸ್ಥೆಗಳಲ್ಲಿ ತೃತೀಯ ಹಂತದ ಚಿಕಿತ್ಸೆ ನೀಡಲಾಗಿದೆ. ಎರಡನೇ ಹಂತದಲ್ಲಿ ಇನ್ನೂ 15 ಜಿಲ್ಲೆಗಳ 41 ಆಸ್ಪತ್ರೆಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು.
- ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯ ಗುಣಮಟ್ಟ ಸುಧಾರಣೆಗಾಗಿ ಪಿಪಿಪಿ ಮಾದರಿಯಲ್ಲಿ ಏಕಬಳಕೆಯ ಡಯಾಲೈಸರುಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಅಸ್ತಿತ್ವದಲ್ಲಿರುವ 168 ಡಯಾಲಿಸಿಸ್ ಕೇಂದ್ರಗಳನ್ನು 219 ಕ್ಕೆ ಹೆಚ್ಚಿಸಿ, ಒಟ್ಟು 800 ಡಯಾಲಿಸಿಸ್ ಯಂತ್ರಗಳೊಂದಿಗೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ 4.13 ಲಕ್ಷ ಡಯಾಲಿಸಿಸ್ ಸೈಕಲ್‌ಗಳನ್ನು ನಿರ್ವಹಿಸಲಾಗಿದೆ.
- ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ರಾಜ್ಯದಲ್ಲಿ 1650 ಚಿಕಿತ್ಸಾ ವಿಧಾನಗಳಿದ್ದು, 31.33 ಲಕ್ಷ ಫಲಾನುಭವಿಗಳಿಗೆ ನಗದು ರಹಿತ ಚಿಕಿತ್ಸೆಗಾಗಿ ಒಟ್ಟು 1746.27 ಕೋಟಿ ರೂ. ವೆಚ್ಚ ಭರಿಸಲಾಗಿದೆ. .
- ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ, ಮೈಸೂರಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಟ್ರಾಮಾ ಕೇರ್ ಸೆಂಟರ್‌ಗಳು ಕಾರ್ಯಾರಂಭ ಮಾಡಿವೆ.
- ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 11,494 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ.
- 2023-24 ನೇ ಶೈಕ್ಷಣಿಕ ಸಾಲಿನಿಂದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲಾಗಿದೆ. ಪರೀಕ್ಷಾ ಪದ್ಧತಿಯಲ್ಲಿ ಸುಧಾರಣಾ ವ್ಯವಸ್ಥೆಯನ್ನು ಅಳವಡಿಸಿದ್ದು 1, 2 ಮತ್ತು 3 ಪರೀಕ್ಷೆಗಳಲ್ಲಿ ಗಳಿಸಿದ ಅತ್ಯುತ್ತಮ ಅಂಕವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಲಾಗಿದೆ.
- ರಾಜ್ಯ ಶಿಕ್ಷಣ ನೀತಿ ಜಾರಿಗೆ ಪ್ರೊ. ಸುಖ್‌ದೇವ್ ಥೋರಟ್ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದ್ದು, ಮೊದಲ ಹಂತದಲ್ಲಿ ಹಿಂದಿನಂತೆ ಮೂರು ವರ್ಷದ ಪದವಿ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
- ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1842 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಪೈಕಿ 1242 ಹುದ್ದೆಗಳ ನೇಮಕಾತಿ ಅಂತಿಮ ಹಂತದಲ್ಲಿದೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 410 ಪ್ರಾಂಶುಪಾಲರ ಹುದ್ದೆಗಳ ಪೈಕಿ 310 ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗಿದೆ.
ಸಮಾಜ ಕಲ್ಯಾಣ
- ಕರ್ನಾಟಕ ರಾಜ್ಯದ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ(ಕೆ.ಟಿ.ಪಿ.ಪಿ) 1999 ಕ್ಕೆ ತಿದ್ದುಪಡಿ ತಂದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ರೂ.00 ಕೋಟಿಯವರೆಗಿನ ಅಂದಾಜು ವೆಚ್ಚದ ಕಾಮಗಾರಿಗಳ ಟೆಂಡರ್‌ಗಳಲ್ಲಿ 24.10% ನಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ.
- ಎಸ್.ಸಿ/ಎಸ್.ಟಿ ಜನರಿಗೆ ಸರ್ಕಾರದಿಂದ ಮಂಜೂರಾದ ಜಮೀನುಗಳು ಅನಧಿಕೃತವಾಗಿ ಪರಭಾರೆ ಆಗಿದ್ದಲ್ಲಿ, ಸಕ್ಷಮ ಪ್ರಾಧಿಕಾರಗಳಿಗೆ ದೂರು ಸಲ್ಲಿಸಲು ಯಾವುದೇ ಕಾಲಮಿತಿ ಇರುವುದಿಲ್ಲವೆಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ 1978ಕ್ಕೆ ತಿದ್ದುಪಡಿ ತರಲಾಗಿದೆ.
- ಪ.ಜಾತಿಯ ಉದ್ಯಮಿಗಳಿಗೆ 4% ಬಡ್ಡಿ ಸಹಾಯಧನ;- ಪ.ಜಾತಿಯ 909 ಉದ್ಯಮಿಗಳಿಗೆ ಕೆ.ಎಸ್.ಎಫ್.ಸಿ & ಬ್ಯಾಂಕ್‌ಗಳ ಮೂಲಕ ರೂ.66 ಕೋಟಿ ಮೊತ್ತದ ಬಡ್ಡಿ ಸಹಾಯಧನ ನೀಡಲಾಗಿದೆ.
- 2023-24ನೇ ಸಾಲಿನಲ್ಲಿ ಪ.ಜಾತಿಯ ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕಾಗಿ ರೂ.710 ಕೋಟಿ ಅನುದಾನ ಒದಗಿಸಿದ್ದು, 27 ಶಾಲಾ ಸಂಕೀರ್ಣಗಳ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಮತ್ತು 23 ಕಟ್ಟಡಗಳು ಪ್ರಗತಿಯಲ್ಲಿವೆ.
- ಗಂಗಾ ಕಲ್ಯಾಣ ಯೋಜನೆ ಅಡಿ 4,040 ಕೊಳವೆ ಬಾವಿಗಳನ್ನು ರೂ.57 ಕೋಟಿ ವೆಚ್ಚದಲ್ಲಿ ಕೊರೆಯಲಾಗಿದೆ. ಹಿಂದಿನ ಸಾಲಿನ ಕೊಳವೆ ಬಾವಿಗಳನ್ನು ಸೇರಿಸಿ 4,700 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
- ನೇರ ಸಾಲ ಮತ್ತು ಸ್ವಯಂ ಉದ್ಯೋಗ ಯೋಜನೆ ಅಡಿ ಪ.ಜಾತಿಯ 16,112 ಫಲಾನುಭವಿಗಳಿಗೆ ರೂ. 15 ಕೋಟಿ ವೆಚ್ಚದಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗಿದೆ
- 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒದಗಿಸಿರುವ ಅನುದಾನದಲ್ಲಿ ಶುಲ್ಕವಿನಾಯಿತಿ ಕಾರ್ಯಕ್ರಮದಡಿ ಹಿಂದಿನ ಸಾಲುಗಳಲ್ಲಿ ಬಾಕಿಯಿದ್ದ ಬಾಬು ರೂ. 20 ಕೋಟಿ ಮೊತ್ತವನ್ನು 349741 ವಿದ್ಯಾರ್ಥಿಗಳಿಗೆ ಪಾವತಿಸಲಾಗಿರುತ್ತದೆ.
- 2023-24ನೇ ಸಾಲಿನಲ್ಲಿ ಊಟ ಮತ್ತು ವಸತಿ ಸಹಾಯ ಯೋಜನೆ- ವಿದ್ಯಾಸಿರಿ ಯೋಜನೆಯಡಿ 39332 ವಿದ್ಯಾರ್ಥಿಗಳಿಗೆ ಒಟ್ಟು ರೂ.99 ಕೋಟಿಗಳ ಸಹಾಯಧನವನ್ನು ಮಂಜೂರು ಮಾಡಲಾಗಿರುತ್ತದೆ.
- ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಸನ್ಮಾನ್ಯ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯ ಭವನ/ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ರೂ.00 ಕೋಟಿಗಳನ್ನು ಮಂಜೂರು ಮಾಡಲಾಗಿರುತ್ತದೆ.
- 2023-24ನೇ ಸಾಲಿನಲ್ಲಿ ಅಲ್ಪ ಸಂಖ್ಯಾತರ 62 ವಸತಿ ಶಾಲೆಗಳನ್ನು ಪಿ.ಯು ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗಿದೆ ಹಾಗೂ ಅಲ್ಪಸಂಖ್ಯಾತರ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗಿದ್ದು ಇದರಿಂದಾಗಿ 3387 ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಪಡೆದಿರುತ್ತಾರೆ.
- ಸಮುದಾಯ ಆಧಾರಿತ ತರಬೇತಿ ಕಾರ್ಯಕ್ರಮದಡಿ ಅಲ್ಪಸಂಖ್ಯಾತ ಸಮುದಾಯದ ಒಟ್ಟು 1951 ಫಲಾನುಭವಿಗಳಿಗೆ ಒಟ್ಟು ರೂ.47 ಕೋಟಿ ವೆಚ್ಚದಲ್ಲಿ ಕೌಶಲ್ಯ ತರಬೇತಿಯನ್ನು ನೀಡಲಾಗಿದೆ.
- ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ 3 ವರ್ಷಗಳ ಅವಧಿಗೆ ರೂ. 00 ಕೋಟಿಗಳ ಕ್ರಿಯಾ ಯೋಜನೆಯನ್ನು ರೂಪಿಸಿ ರೂ. 306.00 ಕೋಟಿಗಳನ್ನು ವೆಚ್ಚ ಮಾಡಲಾಗಿದೆ.
- ರಾಜ್ಯದ ಆಯ್ದ 4000 ಗ್ರಾಮ ಪಂಚಾಯತಿಗಳಲ್ಲಿ ಶಿಶುಪಾಲನಾ ಕೇಂದ್ರ “ಕೂಸಿನ ಮನೆ” ಗಳ ಸ್ಥಾಪನೆ: ಜುಲೈ 2023ರ ಆಯವ್ಯಯ 2023-24ರಲ್ಲಿ ಘೋಷಿಸಿದಂತೆ, ನರೇಗಾ ಯೋಜನೆಯಡಿ ಅತಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ 4000 ಗ್ರಾಮ ಪಂಚಾಯತಿಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ 3 ವರ್ಷದೊಳಗಿನ ಮಕ್ಕಳ ಪಾಲನೆ, ಪೋಷಣೆಗಾಗಿ ಶಿಶುಪಾಲನಾ ಕೇಂದ್ರಗಳನ್ನು “ಕೂಸಿನ ಮನೆ” ಎಂಬ ಹೆಸರಿನಲ್ಲಿ ಪ್ರಾರಂಭಿಸಲಾಗಿದೆ.
- ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಳೆದ ಒಂದು ವರ್ಷದಲ್ಲಿ 5 ಲಕ್ಷ ಕುಟುಂಬಗಳಿಗೆ ಸೇರಿದ 58.63 ಲಕ್ಷ ಜನರಿಗೆ ಕೆಲಸ ಒದಗಿಸಲಾಗಿದೆ. ಇಲ್ಲಿಯವರೆಗೆ 14.07 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆ ಮಾಡಲಾಗಿದ್ದು, ಒಟ್ಟು ರೂ. 3830.69 ಕೋಟಿ ಕೂಲಿ ಮೊತ್ತವನ್ನು ಕೂಲಿಕಾರರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ.
- 2023-24ನೇ ಸಾಲಿನಿಂದ (ಮೇ 17, 2023 ರಿಂದ04.2024) ಜಲ್ ಜೀವನ್ ಮಿಷನ್ ಯೋಜನೆಯಲ್ಲಿ 8,23,181 ಮನೆಗಳಿಗೆ ರೂ.12,193.45 ಕೋಟಿಗಳ ವೆಚ್ಚದೊಂದಿಗೆ ಕಾರ್ಯಾತ್ಮಕ ನಳ ನೀರು ಸಂಪರ್ಕವನ್ನು ಒದಗಿಸಲಾಗಿದೆ.
- ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 2023- 24ನೇ ಸಾಲಿನಲ್ಲಿ ರಾಜ್ಯದ ವಿವಿಧ ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೂ. 170 ಕೋಟಿಗಳ ಅನುದಾನದಲ್ಲಿ 2988 ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಅನುಮೋದನೆಯನ್ನು ನೀಡಲಾಗಿದೆ.
- ಸಾರ್ವಜನಿಕರು ಇನ್ನೂ ಮುಂದೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ “11 ಇ ನಕ್ಷೆ”. “ಜಮೀನಿನ ತತ್ಕಾಲ್ ಪೋಡಿಗಾಗಿ ಅರ್ಜಿ”, “ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತುಗಾಗಿ ಅರ್ಜಿ” ಸೇವೆಗಳಿಗೆ ಅರ್ಜಿ ಸಲ್ಲಿಸಿ, ಪಡೆಯಲು ತಾಲ್ಲೂಕು ಹಂತದಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ಹೋಬಳಿ ಮಟ್ಟದಲ್ಲಿರುವ ಅಟಲ್ ಜಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡದೇ, ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಸದರಿ ಸೇವೆಗಳನ್ನು ಪಡೆಯಬಹುದಾಗಿದೆ.
- ದೇಶದಲ್ಲಿ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯತಿಗಳ ಆಸ್ತಿ ತೆರಿಗೆ ಯನ್ನು Phone pe, google pay, paytm, ಮುಂತಾದ ಮಾಧ್ಯಮಗಳ ಮೂಲಕ ಪಾವತಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿದೆ. ಸಾರ್ವಜನಿಕರು ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡದೇ, ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಸದರಿ ಸಾಧನಗಳ ಮೂಲಕ ರೂ.42/- ಲಕ್ಷ ಆಸ್ತಿ ತೆರಿಗೆ ವಸೂಲಾತಿ ಮಾಡಲಾಗಿದೆ.
- ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ:- 2023-24ನೇ ಸಾಲಿನ ಆಯವ್ಯಯದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವು ಘೋಷಿಸಿದಂತೆ, ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ತಲಾ 00 ಲಕ್ಷ ರೂ.ಗಳ ಅಪಘಾತ ಪರಿಹಾರ ಹಾಗೂ ಜೀವ ವಿಮಾ ಸೌಲಭ್ಯ ಸೇರಿದಂತೆ ಒಟ್ಟು 4.00 ಲಕ್ಷ ರೂ.ಗಳ ವಿಮಾ ಸೌಲಭ್ಯ ಒದಗಿಸುವ, “ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ”ಯನ್ನು ಹೊಸದಾಗಿ ರೂಪಿಸಲಾಗಿದೆ. ಈವರೆಗೆ ಒಟ್ಟು 4232 ಕಾರ್ಮಿಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು, 3735 ಕಾರ್ಮಿಕರನ್ನು ನೋಂದಾಯಿಸಲಾಗಿದೆ.
- “ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ:- ದಿನ ಪತ್ರಿಕೆ ವಿತರಿಸುವ ಕಾರ್ಮಿಕ (News Paper Delivery Boy) ರಿಗೆ ರೂ.00 ಲಕ್ಷಗಳ ಅಪಘಾತ ಪರಿಹಾರ ಹಾಗೂ ರೂ.1.00 ಲಕ್ಷದವರೆಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸುವ “ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ”ಯನ್ನು ಹೊಸದಾಗಿ ರೂಪಿಸಲಾಗಿದ್ದು, ಈವರೆಗೆ ಒಟ್ಟು 4230 ಕಾರ್ಮಿಕರು ನೋಂದಾಯಿತರಾಗಿರುತ್ತಾರೆ.
- ಯುವಸಮೃದ್ಧಿ ಸಮ್ಮೇಳವನ್ನು 2024ರ ಫೆಬ್ರವರಿ 26 ಮತ್ತು 27 ರಂದು ಆಯೋಜಿಸಲಾಗಿದೆ. 781 ಕಂಪನಿಗಳು ಭಾಗವಹಿಸಿದ್ದು ಮತ್ತು 55,286 ಅಭ್ಯರ್ಥಿಗಳು ನೋಂದಾಯಿಸಿಕೊಂಡಿರುತ್ತಾರೆ. ಒಟ್ಟು 11,754 ಅಭ್ಯರ್ಥಿಗಳಿಗೆ ಉದ್ಯೋಗ ಪತ್ರಗಳನ್ನು ನೀಡಲಾಗಿದೆ ಮತ್ತು 26,195 ಅಭ್ಯರ್ಥಿಗಳನ್ನು ಮುಂದಿನ ಸುತ್ತಿಗೆ ಉದ್ಯೋಗ ನೀಡಲು ಪಟ್ಟಿ ಮಾಡಲಾಗಿದೆ.
- ಕರ್ನಾಟಕ ಜರ್ಮನ್ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸೊಸೈಟಿಯು 6242 ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡಿದೆ, ಅದರಲ್ಲಿ 381 ಅಭ್ಯರ್ಥಿಗಳಿಗೆ ಉದ್ಯೋಗ ನಿಯುಕ್ತಿಗೊಳಿಸಲಾಗಿದೆ.
- ಟಾಟಾ ಟೆಕ್ನಾಲಜಿ ಲಿಮಿಟೆಡ್ ಸಹಯೋಗದೊಂದಿಗೆ ಉನ್ನತೀಕರಿಸಲಾದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ 6582 ಅಭ್ಯರ್ಥಿಗಳಿಗೆ ಇಂಡಸ್ಟ್ರಿ, 4.0ರಡಿ 23 ಅಲ್ಪಾವಧಿ ಕೋರ್ಸ್ ಗಳಲ್ಲಿ ತರಬೇತಿ ನೀಡಲಾಗುತ್ತಿದೆ.
- ಒಟ್ಟು 25,613 ಗ್ರಾಮೀಣ ಭಾಗದ ನಿರುದ್ಯೋಗಿ BPL ಯುವಕ/ಯುವತಿಯರಿಗೆ ಮತ್ತು ಮಹಿಳೆಯರಿಗೆ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರಗಳ (RSETI) ಮೂಲಕ ಉಚಿತವಾಗಿ ಸ್ವಯಂ ಉದ್ಯೋಗ ಕೌಶಲ್ಯವನ್ನು ನೀಡಲಾಗಿದೆ ಮತ್ತು 19,271 ತರಬೇತಿ ಪಡೆದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಕಲ್ಪಿಸಲಾಗಿದೆ.
ನಗರಾಭಿವೃದ್ಧಿ:
- ಕಾವೇರಿ ನೀರು ಸರಬರಾಜು ಯೋಜನೆ 5ನೇ ಹಂತದ ಯೋಜನೆಗೆ ಜೈಕಾ ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ರೂ.00 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. 31-03-2024 ರ ಅಂತ್ಯಕ್ಕೆ, ಸಂಚಿತ ವೆಚ್ಚವು ರೂ.3787.42 ಕೋಟಿಗಳಷ್ಟಾಗಿದೆ. ಇದು 2023-24ರ ಮಾರ್ಚ್-2024 ರವರೆಗೆ ರೂ.897.68 ಕೋಟಿ ಒಳಗೊಂಡಿರುತ್ತದೆ. ಯೋಜನೆಯು ಪೂರ್ಣಗೊಂಡ ನಂತರ, ಬಿಬಿಎಂಪಿಯ 110 ಗ್ರಾಮಗಳ 225 ಚ.ಕಿ.ಮೀ. ವಿಸ್ತೀರ್ಣವನ್ನು ಒಳಗೊಂಡಿರುವ 12 ಲಕ್ಷ ನಿವಾಸಿಗಳಿಗೆ ಪ್ರಯೋಜನೆಯಾಗುವುದನ್ನು ನಿರೀಕ್ಷಿಸಲಾಗಿದೆ.
- ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳು) ಮುಖ್ಯ ಮಂತ್ರಿಗಳ ಅಮೃತ ನಗರೋತ್ಮಾನ (ಮುನಿಸಿಪಾಲಿಟಿ) ಯೋಜನ (ಹಂತ 4) ಯನ್ನು 2022-23 ರಿಂದ 2024-25ನೇ ಸಾಲಿನವರೆಗೆ 307 ನಗರ ಸ್ಥಳೀಯ ಸಂಸ್ಥೆಗಳಲ್ಲಿ ರೂ. 3885.00 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಸದರಿ ಯೋಜನೆಯಡಿ ಮೇ 2023 ರಿಂದ ಮಾರ್ಚ್ 2024 ಅಂತ್ಯದವರೆಗೆ 400 ಕಾಮಗಾರಿಗಳು ಪೂರ್ಣಗೊಂಡಿದ್ದು, ರೂ. 70 ಕೋಟಿಗಳ ವೆಚ್ಚ ಮಾಡಲಾಗಿದೆ.
- ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಕೆಲಸ ನಿರ್ವಹಿಸುವ ಹಲವಾರು ವಾಹನ ಚಾಲಕರು ಮತ್ತು ಕಾರ್ಮಿಕರು ಹಾಗೂ ಇತರ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇಂದಿರಾ ಕ್ಯಾಂಟಿನ್ ಎರಡು ಇಂದಿರಾ ಕ್ಯಾಂಟಿನ್ ಗಳನ್ನು ಉದ್ಘಾಟಿಸಲಾಗಿದೆ.
- ಹೊರವರ್ತುಲ ರಸ್ತೆಯ ಹೆಬ್ಬಾಳ ಜಂಕ್ಷನ್ ನಲ್ಲಿರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಹಾಲಿ ಮೇಲುಸೇತುವೆಯ ಅಗಲೀಕರಣದ ಕಾಮಗಾರಿಯನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಬರುವ ರಸ್ತೆಯನ್ನು ಭಾಗಶಃ ಎರಡು/ನಾಲ್ಕು/ಮೂರು ಪಥದ ರಸ್ತೆಯ ವಿಸ್ತರಣೆಯನ್ನು ಕೈಗೊಳ್ಳಲಾಗಿದ್ದು, ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ವಿಮಾನ ನಿಲ್ದಾಣದ ಕಡೆಗೆ ಮೇಲೇತುವೆಗಾಗಿ 30 ಪಾಯಗಳ (Pile Foundation) ಪೈಕಿ 21 ಪಾಯ ಪೂರ್ಣಗೊಂಡಿದ್ದು ಮತ್ತು 13 ಕಂಬಗಳನ್ನು (Pier) ನಿರ್ಮಿಸುವ ಕಾಮಗಾರಿ ಪುಗತಿಯಲ್ಲಿರುತ್ತದೆ.
ಲೋಕೋಪಯೋಗಿ ಇಲಾಖೆ
- ಲೋಕೋಪಯೋಗಿ ಇಲಾಖೆಗೆ ರೂ.9722 ಕೋಟಿ ಅನುದಾನ ಒದಗಿಸಿದ್ದು, ರೂ. 9641 ಕೋಟಿ ವೆಚ್ಚ ಮಾಡಲಾಗಿದೆ. (ಶೇ 20%)
- ವಿವಿಧ ಯೋಜನೆಗಳಡಿ 2381 ಕಿಮೀ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಮತ್ತು ನವೀಕರಣ ಪೂರ್ಣಗೊಳಿಸಿದೆ. ಹಾಗೂ 2953 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿ ಮತ್ತು ನವೀಕರಣ ಪೂರ್ಣಗೊಳಿಸಲಾಗಿದೆ.
- ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ 182 ಸಂಖ್ಯೆ ಸೇತುವೆಗಳ ನಿರ್ಮಾಣ ಪೂರ್ಣಗೊಳಿಸಲಾಗಿದೆ.
- ಕಾಮಗಾರಿಗಳ ಅನುಷ್ಠಾನದಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲು ರೂ. 00 ಕೋಟಿ ಮೊತ್ತದ ರಸ್ತೆ ಕಾಮಗಾರಿಗಳಿಗೆ 5 ವರ್ಷ ಅವಧಿಗೆ ಗುತ್ತಿಗೆದಾರರಿಂದ ನಿರ್ವಹಣೆ ಕಡ್ಡಾಯಗೊಳಿಸಿದೆ.
ಕಂದಾಯ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಮಾರಾಟ ಮಾಡಿರುವ ಪ್ರಕರಣಗಳಲ್ಲಿ ಪುನರ್ ಸ್ಥಾಪನೆ ಕೋರಿ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿ ಇರುವುದಿಲ್ಲವೆಂದು ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978 ಗೆ ತಿದ್ದುಪಡಿ ತರಲಾಗಿದೆ.
ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಭೂ ಪರಿವರ್ತಿಸುವ ವಿಧಾನವನ್ನು ಸರಳೀಕರಣಗೊಳಿಸಿ, ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಗೆ ತಿದ್ದುಪಡಿ ತಂದು ಮಾಸ್ಟರ್ ಪ್ಲಾನ್ ಪ್ರಕಟಿಸಿದ ಪ್ರದೇಶದಲ್ಲಿ ನಗರ ಯೋಜನಾ ಪ್ರಾಧಿಕಾರಕ್ಕೆ ಸ್ವಯಂ ಘೋಷಣೆಯೊಂದಿಗೆ ಶುಲ್ಕವನ್ನು ಸಂದಾಯ ಮಾಡಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಮಾಸ್ಟರ್ ಪ್ಲಾನ್ ಪ್ರಕಟಿಸದಿದ್ದ ಪ್ರದೇಶದಲ್ಲಿ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
- ಸಾರ್ವಜನಿಕರು ಪ್ರತಿನಿತ್ಯ ದೈನಂದಿನ ಭೂಮಿ ವ್ಯವಹಾರ ಸಂಬಂಧಿತ ಸರ್ವೆ ಕಾರ್ಯಕ್ಕಾಗಿ ಸಲ್ಲಿಸಲಾಗುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗಿದ್ದು, 1 ವರ್ಷದ ಅವಧಿಯಲ್ಲಿ ಸಾರ್ವಜನಿಕರ 53 ಲಕ್ಷ ಅರ್ಜಿಗಳನ್ನು ಈ ಅವಧಿಯಲ್ಲಿ ವಿಲೇವಾರಿ ಮಾಡಿ ಸೇವ ಒಗದಿಸಲಾಗಿದೆ.
- ಭೂದಾಖಲೆಗಳ ಸ್ಕ್ಯಾನಿಂಗ್:
- ನಾಲ್ಕು ಕೋಟಿ ಸರ್ವೆ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುವ ಮೂಲಕ ಸಂರಕ್ಷಿಸಲಾಗಿದೆ.
- ಸಾರ್ವಜನಿಕರು ಆನ್ ಲೈನ್ ನಲ್ಲಿ ಯಾವುದೇ ಶುಲ್ಕ ಪಾವತಿಸದೇ ದಾಖಲೆಗಳನ್ನು ವೀಕ್ಷಿಸಬಹುದು ಹಾಗೂ ಶುಲ್ಕಪಾವತಿಸಿ ಡೌನ್ ಲೋಡ್ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಲಾಗಿದೆ.
- ಮೂಲ ಸರ್ವೆ ದಾಖಲೆಯಾದ “ಆಕಾರಬಂದ್ ದಾಖಲೆ” ಯನ್ನು ಗಣಕೀಕರಣ ಗೊಳಿಸುವ ಕಾರ್ಯ ಕೈಗೊಳ್ಳಲಾಗುತ್ತಿದ್ದು 36,99,526 ಸಾಲುಗಳನ್ನು ಗಣಕೀಕರಣಗೊಳಿಸಿ ಸಾರ್ವಜನಿಕರಿಗೆ ವೀಕ್ಷಿಸಲು ಅನುವುಮಾಡಿಕೊಡಲಾಗಿದೆ.
- ಬರ ಪೀಡಿತ ತಾಲ್ಲೂಕುಗಳಲ್ಲಿ ಅಗತ್ಯತೆಗೆ ಅನುಗುಣವಾಗಿ 28 ಗೋಶಾಲೆಗಳನ್ನು ತೆರೆದಿದ್ದು, ಈ ಗೋಶಾಲೆಗಳಲ್ಲಿ ಒಟ್ಟು 19,025 ಜಾನುವಾರುಗಳು ಇರುತ್ತದೆ. ಹಾಗೆಯೇ 44 ತಾಲ್ಲೂಕುಗಳಲ್ಲಿ ಮೇವು ಬ್ಯಾಂಕ್ ಗಳನ್ನು ತೆರೆದಿದ್ದು ಒಟ್ಟು 12,86,031 ಕೆ.ಜಿ.ಗಳ ಮೇವನ್ನು ವಿತರಿಸಲಾಗಿರುತ್ತದೆ.
ಆರ್ಥಿಕ ಅಭಿವೃದ್ಧಿಗೆ ಉತ್ತೇಜನ
- ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ವಿವಿಧ ಸಂಸ್ಥೆಗಳೊಂದಿಗೆ ರಾಜ್ಯದಲ್ಲಿ ರೂ. 64,796 ಕೋಟಿ ಹೂಡಿಕೆಗೆ 14 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ 72,600 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
- ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಗಳಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ ಸುಮಾರು ರೂ. 84,232 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, 1,56,989 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ.
- ಕರ್ನಾಟಕ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಉತ್ತೇಜನ ನೀಡಲಾಗುತ್ತಿದೆ. ಈ ಸಂಬಂಧ ಬೆಸ್ಕಾಂ ಸಂಸ್ಥೆಯೊಂದಿಗೆ ರೂ.00 ಕೋಟಿಗಳ ಒಡಂಬಡಿಕೆ ಮಾಡಿಕೊಂಡಿದ್ದು, ವಿದ್ಯುತ್ ಚಾಲಿತ ವಾಹನಗಳ ಬಳಕೆದಾರರಿಗೆ ಅನುವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 70 ಸ್ಥಳಗಳಲ್ಲಿ ಬೆಸ್ಕಾಂ ವತಿಯಿಂದ ಈಗಾಗಲೇ 100 ಎಸಿ ಮತ್ತು 26 ಡಿಸಿ ಚಾರ್ಜಿಂಗ್ ಘಟಕಗಳನ್ನು ಸ್ಥಾಪಿಸಲಾಗಿದ್ದು, ಮೊಬೈಲ್ ಆಪ್ ಮುಖಾಂತರ ಸದರಿ ಘಟಕಗಳನ್ನು ಗುರುತಿಸಬಹುದು ಮತ್ತು ಚಾರ್ಜಿಂಗ್ ಯೂನಿಟ್ ಮೊತ್ತವನ್ನು ಪಾವತಿಸಬಹುದಾಗಿದೆ. ಅಲ್ಲದೇ ಈ ತರಹದ ಚಾರ್ಜಿಂಗ್ ಘಟಕಗಳನ್ನು ರಾಜ್ಯವ್ಯಾಪ್ತಿ ಹೆದ್ದಾರಿಗಳಲ್ಲಿ ಸ್ಥಾಪಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ
- ರಾಜ್ಯದ ಸುಮಾರು 77 ಲಕ್ಷ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಪ್ರಯೋಜನ ಪಡೆದಿರುತ್ತಾರೆ. ಮಹಿಳಾ ಉಚಿತ ಪ್ರಯಾಣದ ಬಾಬು ರೂ.4857.95 ಕೋಟಿ ಮೌಲ್ಯದ ಟಿಕೆಟ್‌ನ್ನು ನಾಲ್ಕು ಸಾರಿಗೆ ಸಂಸ್ಥೆಗಳಿಂದ ವಿತರಣೆಯಾಗಿದ್ದು, ಮಾರ್ಚ್-2024ರ ಅಂತ್ಯದವರೆಗೆ ಸರ್ಕಾರದಿಂದ ಒಟ್ಟಾರೆ ರೂ. 3199.75 ಕೋಟಿ ಅನುದಾನ ಬಿಡುಗಡೆಯಾಗಿರುತ್ತದೆ.
ರಾಜ್ಯದ ಹಣಕಾಸು ಪರಿಸ್ಥಿತಿ:
- ತೆರಿಗೆ ಸಂಗ್ರಹಣೆ – 2023-24ನೇ ಆರ್ಥಿಕ ವರ್ಷದಲ್ಲಿ ರಾಜ್ಯದ ಸ್ವಂತ ತೆರಿಗೆ ರಾಜಸ್ವ ಸ್ವೀಕೃತಿಯು 2022-23ನೇ ಸಾಲಿಗೆ ಹೋಲಿಸಿದರೆ ಶೇ.12ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ರಾಜ್ಯ ಸರ್ಕಾರವು ಸಂಪನ್ಮೂಲ ಕ್ರೋಢೀಕರಿಸಲು ಕೈಗೊಂಡ ಕಟ್ಟು ನಿಟ್ಟಿನ ಕ್ರಮಗಳಿಂದಾಗಿ ತೆರಿಗೆ ಸಂಗ್ರಹಣೆಯು ಈ ಬೆಳವಣಿಗೆಯನ್ನು ಹೊಂದಿದೆ. ಪ್ರಮುಖ ತೆರಿಗೆ ಸ್ವೀಕೃತಿಗಳಾದ ವಾಣಿಜ್ಯ ತೆರಿಗೆ, ಅಬಕಾರಿ ತೆರಿಗೆ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಳೆದ ಸಾಲಿಗೆ ಹೋಲಿಸಿದರೆ ಕ್ರಮವಾಗಿ ಶೇಕಡ 14, 15 ಹಾಗೂ 13ರಷ್ಟು ಬೆಳವಣಿಗೆ ಹೊಂದಿದೆ.
- ಬಂಡವಾಳ ವೆಚ್ಚ- ಸರ್ಕಾರವು ರಾಜ್ಯದ ಆರ್ಥಿಕ ಪ್ರಗತಿಯನ್ನು ಉತ್ತೇಜಿಸಲು ಬಂಡವಾಳ ವೆಚ್ಚಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುತ್ತದೆ. 2023-24ರ ಆಯವ್ಯಯದಲ್ಲಿ ಬಂಡವಾಳ ಯೋಜನೆಗಳಿಗೆ 54,374 ಕೋಟಿ ರೂ.ಗಳ ವೆಚ್ಚವನ್ನು ಅಂದಾಜಿಸಲಾಗಿತ್ತು. ಆದರೆ ಸರ್ಕಾರವು 2023-24ನೇ ಸಾಲಿನಲ್ಲಿ ಬಂಡವಾಳ ಯೋಜನೆಗಳಿಗೆ 56,274 ಕೋಟಿ ರೂ.ಗಳ ಅನುದಾನವನ್ನು ವಿನಿಯೋಗಿಸುವುದರೊಂದಿಗೆ ಬಂಡವಾಳ ವೆಚ್ಚವು ಆಯವ್ಯಯ ಅಂದಾಜಿಗಿಂತ 1,901 ಕೋಟಿ ರೂ.ಗಳಷ್ಟು ಹೆಚ್ಚಳವಾಗಿರುತ್ತದೆ.