ಮಡಿಕೇರಿ : ಪ್ರಸಕ್ತ(2022-23) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ “ಸ್ನಾತಕೋತ್ತರ ಹಾಗೂ ವೃತ್ತಿಪರ” ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ, 11 ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ http://shp.karnataka.gov.in ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ರೂ.1 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ www.bcwd.karnataka.gov.in ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.
GOOD NEWS : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
GOOD NEWS : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ