ಹಾವೇರಿ: ಬ್ಯಾಡಗಿ ಹಾಗೂ ಚಿಕ್ಕಬಾಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ್ರ ವರ್ಗ ಮತ್ತು ಇತರೆ ಜನಾಂಗದಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ.ಯವರಿಗೆ ರೂ.2.50 ಲಕ್ಷದೊಳಗೆ ಹಾಗೂ ಪ್ರವರ್ಗ-2ಎ, 2ಬಿ,3ಎ,3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರಿಗೆ ಒಂದು ಲಕ್ಷ ರೂ.ದೊಳಗಿರಬೇಕು.
ವಿದ್ಯಾರ್ಥಿಗಳು www.bcwd.karnataka.gov.in ನಲ್ಲಿ ದಿನಾಂಕ 15-07-2022ರೊಳಗೆ ಅರ್ಜಿ ಸಲ್ಲಿಸಬೇಕು. ತಾಲೂಕುವಾರು ವಿದ್ಯಾರ್ಥಿ ನಿಲಯಗಳವಿವರ ಹಾಗೂ ವಿದ್ಯಾರ್ಥಿನಿಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆ www.bcwd.karnataka.gov.in ವೆಬ್ಸೈಟ್ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 080-8050370006ನ್ನು ಸಂಪರ್ಕಿಸಬಹು.
ಹೆಚ್ಚಿನ ಮಾಹಿತಿಗಾಗಿ ಬ್ಯಾಡಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.08375-296002 ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.