ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ 18 ರಿಂದ 35 ವರ್ಷದೊಳಗಿನ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರ ಆರ್ಥಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಮತ್ತು ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳ ಒಳಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವಂತಿಲ್ಲ.
ಆಸಕ್ತರು ಅರ್ಜಿಯನ್ನು https://suvidha.karnataka.gov.in, ಸುವಿಧಾ ಜಾಲತಾಣದಲ್ಲಿ ದಿ: 24/08/2022ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ www.dbcdc.karnataka.gov.in, ಸಹಾಯವಾಣಿ ಸಂ.: 080-22374832/9606066389 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ಗಳನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.