ಬೆಂಗಳೂರು: ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅ.4ರಿಂದ (ಬೆ. 11) ಅ.9 (ಬೆಳಿಗ್ಗೆ 11) ರೊಳಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.
ನೀಟ್-ಪಿಜಿ 2025ರಲ್ಲಿ ಅರ್ಹತೆ ಪಡೆದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸುವ ಕರ್ನಾಟಕ ಸೇವಾನಿರತ ಅರ್ಹ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಡಿ ಎನ್ ಬಿ ಹಾಗೂ ಡಿಪ್ಲೊಮಾ ವೈದ್ಯಕೀಯ ಕೋರ್ಸುಗಳಿಗೂ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳು, ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುವ ಸರ್ಕಾರಿ ಕೋಟಾ ಸೀಟುಗಳು ಮತ್ತು ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿನ ಖಾಸಗಿ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನೋಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವಿವರಗಳು, ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು, ಹಾಗೂ ಇತರೆ ವಿವರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ನೋಂದಣಿ ಮಾಡಿ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗದಿಪಡಿಸುವ ದಿನಾಂಕಗಳಂದು ಅರ್ಹತೆಗೆ ಅನುಗುಣವಾಗಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು ಎಂದು ವಿವರಿಸಲಾಗಿದೆ.
ಹೆಚ್ಚಿನ ವಿವರಗಳಿಗೆ https://cetonline.karnataka.gov.in/KEA/pgetmed2025 ನೋಡಲು ಸೂಚಿಸಲಾಗಿದೆ.
‘KSET-2025ರ ಪರೀಕ್ಷೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ‘ಕೆಇಎ’ಯಿಂದ ಮಹತ್ವದ ಮಾಹಿತಿ
ALERT : ಧೂಮಪಾನಿಗಳೇ ಎಚ್ಚರ : `ಸಿಗರೇಟ್’ನಿಂದ ಈ ಗಂಭೀರ ಕಾಯಿಲೆಗಳು ಬರಬಹುದು.!