Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ಕ್ಕೆ ಆನ್ ಲೈನ್ ಅರ್ಜಿ ಆಹ್ವಾನ | Government employees
KARNATAKA

ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ `ಪ್ರತಿಭಾ ಪುರಸ್ಕಾರ’ಕ್ಕೆ ಆನ್ ಲೈನ್ ಅರ್ಜಿ ಆಹ್ವಾನ | Government employees

By kannadanewsnow57

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ.
ಅದರಂತೆ 2026ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮಾತ್ರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಗಳು 2026 ರ ಎಸ್ಎಸ್ಎಲ್ಸಿ/ಪಿಯುಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. https://powermedia.info ಲಿಂಕ್ ಮುಖಾಂತರ ಅರ್ಜಿ ಸಲ್ಲಿಸುವುದು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಆನ್ಲೈನ್ನಲ್ಲಿ ಅಪ್ಲೋಡ್ ಮಾಡುವುದು.

ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾನಿಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಶಾಲಾ ಕಾಲೇಜಿನ ದೃಢೀಕೃತ ಅಂಕಪಟ್ಟಿ, ಸಂಘವು ನೀಡಿರುವ ನಮೂನೆಯಲ್ಲಿ ಕಚೇರಿ ಮುಖ್ಯಸ್ಥರ ದೃಢೀಕರಣ ಮತ್ತು ಶಾಖಾ ಸಂಘದ ದೃಢೀಕರಣ ಪತ್ರವನ್ನು ಅಪ್ಲೋಡ್ ಮಾಡದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡತಕ್ಕದ್ದು. ಅರ್ಜಿ ಸಲ್ಲಿಸಲು ಮೇ, 25 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಾಜ್ಯ ಸಂಘದ ದೂ.ಸಂ.080-22354783/84 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಗಿರಿಗೌಡ ಅವರು ತಿಳಿಸಿದ್ದಾರೆ.

Online applications invited for `Pratibha Puraskar` for children of state government employees | Government employees
Share. Facebook Twitter LinkedIn WhatsApp Email

Related Posts

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

2 Mins Read

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

1 Min Read

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read
Recent News

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

State News
KARNATAKA

BIG BREAKING: AICC ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಇನ್ನಿಲ್ಲ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಎಐಸಿಸಿ (AICC) ಕಾರ್ಯದರ್ಶಿ ಹಾಗೂ ಕರ್ನಾಟಕ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು…

BIG BREAKING: ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ | Suuraj Hegde No More

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.