Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM

BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

05/05/2026 3:02 PM

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾರಣಿಗರಿಗೆ ಗುಡ್ ನ್ಯೂಸ್: ಇನ್ಮುಂದೆ ಕರ್ನಾಟಕದ ಚಾರಣಪಥಗಳಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ
KARNATAKA

ಚಾರಣಿಗರಿಗೆ ಗುಡ್ ನ್ಯೂಸ್: ಇನ್ಮುಂದೆ ಕರ್ನಾಟಕದ ಚಾರಣಪಥಗಳಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

By kannadanewsnow0904/10/2024 6:10 AM

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದೆ. ಆದರೆ, ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬುದು ಸರ್ಕಾರದ ಕಾಳಜಿಯಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ https://aranyavihaara.karnataka.gov.in ವೆಬ್ ಸೈಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಜನವರಿ 26, 27ರಂದು ಕುಮಾರಪರ್ವತಕ್ಕೆ 5-6 ಸಾವಿರ ಪ್ರವಾಸಿಗರು ಒಂದೇ ದಿನ ಆಗಮಿಸಿದ ಹಿನ್ನೆಲೆಯಲ್ಲಿ ಗೊಂದಲ ಆಗಿತ್ತು. ಇಂತಹ ಗೊಂದಲ ನಿವಾರಿಸಲು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗಿದೆ ಎಂದರು.

ಈ ಚಾರಣಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಖರೀದಿ ಕಡ್ಡಾಯ

ಈ ಅಂತರ್ಜಾಲ ತಾಣದಲ್ಲಿ ರಾಜ್ಯ ಎಲ್ಲ ಚಾರಣ ಪಥಗಳ ಟಿಕೆಟ್ ಅನ್ನೂ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್ ಸಿಗದವರು ಬೇರೆ ಚಾರಣಪಥವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಪ್ರಸ್ತುತ 5 ತಾಣಗಳಿಗೆ ಅಂದರೆ ಕುಮಾರ ಪರ್ವತದಿಂದ ಸುಬ್ರಹ್ಮಣ್ಯ, ಬೀದಹಳ್ಳಿಯಿಂದ – ಕುಮಾರ ಪರ್ವತ, ಬೀದಹಳ್ಳಿ -ಕುಮಾರ ಪರ್ವತ – ಸುಬ್ರಹ್ಮಣ್ಯ, ಚಾಮರಾಜನಗರ – ನಾಗಮಲೈ, ತಲಕಾವೇರಿಯಿಂದ-ನಿಶಾನೆಮೊಟ್ಟೆ ಚಾರಣ ತಾಣಗಳಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ಈ ಮಾಸಾಂತ್ಯದೊಳಗೆ 40 ಚಾರಣ ಪಥಗಳನ್ನು ಈ ಅಂತರ್ಜಾಲ ತಾಣದಲ್ಲಿ ಸೇರಿಸಲಾಗುವುದು. ಜೊತೆಗೆ ವನ್ಯಜೀವಿ ಸಫಾರಿ ಮತ್ತು ಬೋಟ್ ಸಫಾರಿಗೂ ಇದರಲ್ಲೇ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.

ಈ ರೀತಿ ಟಿಕೆಟ್ ಬುಕ್ ಮಾಡಿ

ಚಾರಣ ಪ್ರಿಯರು https://aranyavihaara.karnataka.gov.in ಈ ಲಿಂಕ್ ಗೆ ಭೇಟಿ ನೀಡುವ ಮೂಲಕ ತಮ್ಮ ನೆಚ್ಚಿನ ಚಾರಣಪಥಗಳಲ್ಲಿ ಚಾರಣ ಮಾಡೋದಕ್ಕೆ ಟಿಕೆಟ್ ಕಾಯ್ದಿರಿಸಬಹುದಾಗಿದೆ. ಇಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನೀಡಿ, ಟಿಕೆಟ್ ಖರೀದಿಸಿ, ಚಾರಣ ಮಾಡಬಹುದಾಗಿದೆ.

ಒಂದು ಫೋನ್ ನಂಬರ್ ನಲ್ಲಿ 10 ಟಿಕೆಟ್ ಮುಂಗಡ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗುವುದು, 7 ದಿನ ಮೊದಲು ರದ್ದು ಮಾಡಿದರೆ ಪೂರ್ಣ ಹಣ ಮರಳಿಸಲು ಅವಕಾಶ ಇರುತ್ತದೆ. ನಂತರದ ರದ್ದತಿಗೆ ಪೂರ್ಣ ಹಣ ಸಿಗುವುದಿಲ್ಲ, ಭಾಗಶಃ ಕಡಿತ ಮಾಡಲಾಗುವುದು ಎಂದರು.

ಅಂತರ್ಜಾಲ ತಾಣದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳ ಚಿತ್ರ, ಅವುಗಳ ವಿಶೇಷ ಕುರಿತಂತೆ ಸಂಕ್ಷಿಪ್ತ ಮಾಹಿತಿ ಒದಗಿಸಲಾಗಿದೆ. ಇದರಿಂದ ಚಾರಣಿಗರಿಗೆ ಮತ್ತು ಪ್ರವಾಸಿಗರಿಗೆ ಮಾಹಿತಿಯೂ ಲಭಿಸುತ್ತದೆ. ಟಿಕೆಟ್ ಅನ್ನು ಮುಂಗಡ ಕಾಯ್ದಿರಿಸಲು ಅವಕಾಶವೂ ಆಗುತ್ತದೆ ಎಂದರು.

ಮುಂಗಾರು ಮಳೆ ಸುರಿಯುವ ಸಮಯದಲ್ಲಿ ಚಾರಣ ಮಾಡುವುದು ಸೂಕ್ತವಲ್ಲ. ಅನುಭವ ಇಲ್ಲದ ಚಾರಣಿಗರು ಜಾರಿ ಬೀಳುವ ಅಪಾಯ ಇರುತ್ತದೆ. ಜೊತೆಗೆ ಕೀಟ, ಜೀವ ಜಂತುಗಳಿಗೂ ತೊಂದರೆ ಆಗುತ್ತದೆ. ಹೀಗಾಗಿ ಮಳೆಗಾಲದಲ್ಲಿ ಚಾರಣ ನಿರ್ಬಂಧಿಸುವುದು ಒಂದು ಕಾರಣವಾಗಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಅಕ್ರಮಕ್ಕೆ ಕಡಿವಾಣ

ಈ ಚಾರಣ ಪಥಗಳ ಟಿಕೆಟ್ ಅನ್ನು ಚಾರಣ ಏರ್ಪಡಿಸುವ ಕೆಲವು ಖಾಸಗಿ ಸಂಸ್ಥೆಗಳು ಸಗಟು ಖರೀದಿ ಮಾಡುತ್ತವೆ. ಹೀಗಾಗಿ ನೈಜ ಚಾರಣಿಗರಿಗೆ ಟಿಕೆಟ್ ಲಭಿಸದಂತಾಗಿದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಸರ್ಕಾರದ ಭಾವಚಿತ್ರ ಸಹಿತ ಗುರುತಿನ ಚೀಟಿ ಅಪ್ ಲೋಡ್ ಮಾಡಿ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಗೈಡ್ ಸೌಲಭ್ಯ

ಚಾರಣಕ್ಕೆ ಬರುವವರಿಗೆ ಆ ಗಿರಿ ಪ್ರದೇಶದಲ್ಲಿರುವ ಸಸ್ಯಸಂಕುಲ, ಪ್ರಾಣಿ ಸಂಕುಲ, ಕೀಟ ಸಂಕುಲ, ಪಕ್ಷಿ ಸಂಕುಲದ ಬಗ್ಗೆ ಮಾಹಿತಿ ನೀಡಲು ಮತ್ತು ಆ ಪ್ರದೇಶದ ಸಂಕ್ಷಿಪ್ತ ಇತಿಹಾಸ ತಿಳಿಸಲು ಹಾಗೂ ಚಾರಣದ ವೇಳೆ ಏನೆಲ್ಲಾ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಲು ಪ್ರತಿ 10 – 20 ಚಾರಣಿಗರಿಗೆ ಒಬ್ಬರಂತೆ ಗೈಡ್ ಗಳನ್ನೂ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆಯ ಭಾಗವಾಗಿರುವ ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದ ಚಿಕ್ಕಬಳ್ಳಾಪುರದ ಸ್ಕಂದಗಿರಿ ಚಾರಣಪಥದಲ್ಲಿ ಆನ್ ಲೈನ್ ನಲ್ಲಿ ಟಿಕೆಟ್ ಗಳನ್ನು ಬ್ಲಾಕ್ ಮಾಡಲು ಖಾಸಗಿ ಪ್ರವಾಸೋದ್ಯಮ ಸಂಸ್ಥೆಗಳೊಂದಿಗೆ ಕೆಲವು ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ನೀಡಲಾಗಿದೆ, ಕೆಲವು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ನಕಲಿ ಟಿಕೆಟ್ ಬಳಸಿ ಕಲವರು ಚಾರಣಕ್ಕೆ ಹೋಗುತ್ತಿದ್ದಾರೆ. ಕೆಲವು ಚಾರಣ ಪಥದಲ್ಲಿ ಸಿಬ್ಬಂದಿಯೇ ನಕಲಿ ಟಿಕೆಟ್ ಮಾಡಿಸಿ ಚಾರಣಿಗರಿಗೆ ಒಳ ಹೋಗಲು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪವೂ ಇದ್ದು, ಇದಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಯಲ್ಲಿ ಇರುವಂತೆ ಸಂಚಾರಿ ದಳ ರಚಿಸಲಾಗುವುದು. ಈ ಸಂಚಾರಿ ದಳ ಅನಿರೀಕ್ಷಿತವಾಗಿ ಚಾರಣ ಪಥಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ. ನಕಲಿ ಟಿಕೆಟ್ ಕಂಡು ಬಂದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM1 Min Read

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM2 Mins Read

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM1 Min Read
Recent News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM

BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

05/05/2026 3:02 PM

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM

ನೀವು ಕೇದಾರ್‌ನಾಥ್‌ ಹೋಗಬೇಕೆ? ಹಾಗಾದ್ರೆ ಈ ರೈಲು ಹತ್ತಿ ಸಾಕು; ಒಂದೇ ಟ್ರೈನ್‌, 25 ಪ್ರವಾಸಿ ತಾಣ ನೋಡಬಹುದು!

05/05/2026 2:50 PM
State News
KARNATAKA

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

By kannadanewsnow0905/05/2026 3:03 PM KARNATAKA 1 Min Read

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮುಂದಿನ ಹಂತದ ಚುನಾವಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ…

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM

BREAKING : ಬೀದರ್ ನಲ್ಲಿ ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ : ತಪ್ಪಿದ ಭಾರೀ ದುರಂತ!

05/05/2026 1:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.