ನವದೆಹಲಿ: ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ಸಿಂಧೂ ನದಿ ನೀರು ಒಪ್ಪಂದ ರದ್ದು ಮುಂದುವರೆಯಲಿದೆ. ಭಯೋತ್ಪಾದನೆ ನಿಲ್ಲಿಸಿದ್ರೇ ಮಾತ್ರವೇ ನೀರು ಹರಿಸುವುದಾಗಿ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಡಕ್ ಸಂದೇಶವನ್ನು ಪಾಕ್ ಗೆ ನೀಡಿದ್ದಾರೆ. ಈ ಮೂಲಕ ನೀರು ಬಿಡಿ ಪ್ಲೀಸ್ ಎಂದ ಪಾಪಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವಂತ ಅವರು, ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ವಿಶ್ವಾಸಾರ್ಹವಾಗಿ ಮತ್ತು ಬದಲಾಯಿಸಲಾಗದಂತೆ ಕೊನೆಗೊಳಿಸುವವರೆಗೆ ಸಿಂಧೂ ಜಲ ಒಪ್ಪಂದವು ಸ್ಥಗಿತಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಕಾಶ್ಮೀರದ ಬಗ್ಗೆ ಚರ್ಚಿಸಲು ಉಳಿದಿರುವ ಏಕೈಕ ವಿಷಯವೆಂದರೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ತೆರವುಗೊಳಿಸುವುದು. ನಾವು ಆ ಚರ್ಚೆಗೆ ಮುಕ್ತರಾಗಿದ್ದೇವೆ ಎಂದು ಹೇಳಿದರು.
ಪತ್ರಕರ್ತರ ಮಾಸಾಶನ ನಿಯಮ ಸರಳೀಕರಣಕ್ಕೆ ಕ್ರಮ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್