ಮೈಸೂರು: ಕೆಲ ದಿನಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೈಸೂರಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಮಾಡಿದ್ದರು. ಅದರ ಫಲವಾಗಿ ಕೊನೆಗೂ ಸಿಎಂ ಸಿದ್ಧರಾಮಯ್ಯ ಆಪರೇಷನ್ ಹಸ್ತ ಸಕ್ಸಸ್ ಆಗಿದೆ. ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ತೊರೆದು, ಧೀರಜ್ ಪ್ರಸಾದ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಡಿಸಿಎಂ ಡಿಕೆ ಶಿವಕುಮಾರ್ ಅವರು, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಧೀರಜ್ ಪ್ರಸಾದ್ ಗೆ ಹೂಗುಚ್ಛ ನೀಡಿ, ಕಾಂಗ್ರೆಸ್ ಪಕ್ಷದ ಶಾಲು ಹಾಕಿ, ಆತ್ಮೀಯವಾಗಿ ಬರಮಾಡಿಕೊಂಡರು.
ಅಂದಹಾಗೇ ಅಳಿಯ ಧೀರಜ್ ಪ್ರಸಾದ್ ಗೆ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸೋದಕ್ಕೆ ಪ್ರಯತ್ನಿಸಿದ್ದರು. ಆದ್ರೇ ಅದು ಸಾಧ್ಯವಾಗದೇ ವಿಫಲವಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ನಾಯಕರ ಬಗ್ಗೆ ಬೇಸರಗೊಂಡಿದ್ದಂತ ಧೀರಜ್ ಪ್ರಸಾಧ್, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ‘IT’ ಇಲಾಖೆಯಿಂದ ನೋಟಿಸ್ ಜಾರಿ
BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ