Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ ತೀವ್ರ: ಕಳೆದ 24 ಗಂಟೆಗಳಲ್ಲಿ ಆರು ಮಂದಿ ವೈದ್ಯಕೀಯ ಸಿಬ್ಬಂದಿ ದುರ್ಮರಣ!

BIG NEWS : `LPG’ ಗ್ರಾಹಕರಿಗೆ ಮತ್ತೊಂದು ಶಾಕ್: ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್!

ಕ್ರಿಕೆಟ್ ಮೈದಾನದಲ್ಲಿ ಹೈಡ್ರಾಮಾ: ಪಂದ್ಯದ ಮಧ್ಯೆ ಮಾತಿನ ಚಕಮಕಿ; ಟ್ರಾವಿಸ್ ಹೆಡ್‌ಗೆ ಹ್ಯಾಂಡ್‌ಶೇಕ್ ನಿರಾಕರಿಸಿ ಮುನಿಸು ತೋರಿದ ವಿರಾಟ್ ಕೊಹ್ಲಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ
KARNATAKA

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ

ನವದೆಹಲಿ: ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.

ಇಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು , ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.

ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು. ಪ್ರಮುಖ ಸ್ಥಳಗಳಲ್ಲಿ Mock Drill ಮಾಡಲು ಸೂಚನೆ ನೀಡಿದರು.

ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚಿಸಿದಂತ ಅವರು, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು. ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂಬುದಾಗಿ ಹೇಳಿದರು.

ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು.  ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿಯನ್ನು ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್ಲೈನ್ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು. ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ದೇಶದ, ರಾಜ್ಯದ ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ, ಕೋಮು ವಿಭಜನೆ ತರಲು, ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುತ್ತಿರುವ ಎಲ್ಲರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಎಲ್ಲಾ DC , SP ಗಳು ಕ್ರಮ ವಹಿಸಬೇಕು ಎಂಬುದಾಗಿ ತಿಳಿಸಿದರು.

ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಗೂಂಡಾಗಳ ಪಟ್ಟಿಯನ್ನು update ಮಾಡಬೇಕು. ಅವರ ಮೇಲೆ ನಿಗಾ ಇಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಾದ. ಡಾ ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ರೇವಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ , ನಗರ ಪೊಲೀಸ್ ಆಯುಕ್ತರಾದ ದಯಾನಂದ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

BREAKING: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

BREAKING: ಇನ್ಮುಂದೆ ಯಾವುದೇ ಉಗ್ರರ ದಾಳಿಯನ್ನು ಯುದ್ಧವೆಂದು ಪರಿಗಣಿಸಲು ಭಾರತ ನಿರ್ಧಾರ

Share. Facebook Twitter LinkedIn WhatsApp Email

Related Posts

BIG NEWS : `LPG’ ಗ್ರಾಹಕರಿಗೆ ಮತ್ತೊಂದು ಶಾಕ್: ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್!

2 Mins Read

ರಾಜ್ಯದ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

1 Min Read

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `KPSC’ಯಿಂದ 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

2 Mins Read
Recent News

ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ ತೀವ್ರ: ಕಳೆದ 24 ಗಂಟೆಗಳಲ್ಲಿ ಆರು ಮಂದಿ ವೈದ್ಯಕೀಯ ಸಿಬ್ಬಂದಿ ದುರ್ಮರಣ!

BIG NEWS : `LPG’ ಗ್ರಾಹಕರಿಗೆ ಮತ್ತೊಂದು ಶಾಕ್: ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್!

ಕ್ರಿಕೆಟ್ ಮೈದಾನದಲ್ಲಿ ಹೈಡ್ರಾಮಾ: ಪಂದ್ಯದ ಮಧ್ಯೆ ಮಾತಿನ ಚಕಮಕಿ; ಟ್ರಾವಿಸ್ ಹೆಡ್‌ಗೆ ಹ್ಯಾಂಡ್‌ಶೇಕ್ ನಿರಾಕರಿಸಿ ಮುನಿಸು ತೋರಿದ ವಿರಾಟ್ ಕೊಹ್ಲಿ!

ರಾಜ್ಯದ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

State News
KARNATAKA

BIG NEWS : `LPG’ ಗ್ರಾಹಕರಿಗೆ ಮತ್ತೊಂದು ಶಾಕ್: ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್!

By kannadanewsnow57 KARNATAKA 2 Mins Read

ದೇಶದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರ ಸಂಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಗ್ಯಾಸ್ ಸಿಲಿಂಡರ್ ಬುಕ್ ಮಾಡಿದ ನಂತರ ತೀವ್ರ ವಿಳಂಬವಾಗುತ್ತಿರುವುದು…

ರಾಜ್ಯದ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `KPSC’ಯಿಂದ 2026ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಹಸಿ ಮೀನು Vs ಒಣ ಮೀನು: ಆರೋಗ್ಯಕ್ಕೆ ಯಾವುದು ಬೆಸ್ಟ್? ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.