ಉಡುಪಿ: ಭಾರತೀಯ ಸಶಸ್ತ್ರ ಪಡೆಗಳ ಆಪರೇಷನ್ ಸಿಂಧೂರ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 25ಕ್ಕೂ ಹೆಚ್ಚು ದೇವಾಲಯಗಳು, ಮಸೀದಿಗಳು, ಚರ್ಚುಗಳು ಮತ್ತು ದೈವಸ್ಥಾನಗಳಲ್ಲಿ ಗುರುವಾರ ವಿಶೇಷ ಪ್ರಾರ್ಥನೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಮಂಜುನಾಥ, ಮಂಗಳಾ ದೇವಿ, ಕಟೀಲು ದುರ್ಗಾಪರಮೇಶ್ವರಿ, ಕುಡುಪು ಅನಂತಪದ್ಮನಾಭ, ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ನಂದಾವರ ವಿನಾಯಕ ಶಂಕರನಾರಾಯಣ ದುರ್ಗಂಬ, ಪೊಳಲಿ ರಾಜರಾಜೇಶ್ವರಿ, ಬಪ್ಪನಾಡು ದುರ್ಗಾಪರಮೇಶ್ವರಿ, ಬಂಟ್ವಾಳದ ಕಾರಿಂಜೇಶ್ವರ, ಬೆಳ್ತಂಗಡಿಯ ಚಂದ್ರನಾಥ ಸ್ವಾಮಿ ಮತ್ತು ಪಾರ್ಶ್ವನಾಥ ಸ್ವಾಮಿ ದೇವಾಲಯಗಳು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ, ಪಡಲ ಸುಬ್ರಹ್ಮಣ್ಯ, ಪುತ್ತೂರು ಮಹಾಲಿಂಗೇಶ್ವರ, ಕುಕ್ಕಿನಡ್ಕ ಸುಬ್ರಾಯ, ಪಂಜ ಸದಾಶಿವ ಪಂಚಲಿಂಗೇಶ್ವರ, ಪಣೋಲಿಬೈಲು ದೈವಸ್ಥಾನದ ವಿಶೇಷ ಪ್ರಾರ್ಥನೆಗಳು ನಡೆದವು. ಪುತ್ತೂರಿನ ಬದ್ರಿಯಾ ಜುಮಾ ಮಸೀದಿ ಮತ್ತು ಮೈ ಡಿ ಡ್ಯೂಸ್ ಚರ್ಚ್ ನಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠ, ಬನ್ನಂಜೆ ಮಹಾಲಿಂಗೇಶ್ವರ, ಕಡಿಯಾಳಿ ಮಹಿಷಮರ್ದಿನಿ, ಕನ್ನರ್ಪಾಡಿ ಜಯದುರ್ಗ, ಕಾಪು ಲಕ್ಷ್ಮೀಜನಾರ್ಧನ, ಹಟ್ಟಿಯಂಗಡಿ ಸಿದ್ಧಿವಿನಾಯಕ, ಕೋಟೇಶ್ವರ ಕೋಟಿಲಿಂಗೇಶ್ವರ, ಬೈಂದೂರು ಸೇನೇಶ್ವರ, ದೊಡ್ಮನೆಬೆಟ್ಟು ಮುಖ್ಯಪ್ರಾಣ ಮತ್ತು ಮೊಗೇರಿ ಶಂಕರನಾರಾಯಣ ದೇವಾಲಯಗಳಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು.