ಚಿತ್ರದುರ್ಗ:  ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮುರುಘಾ ಮಠದ ವಕೀಲ ವಿಶ್ವನಾಥಯ್ಯ ಮಾತನಾಡಿ ಮಠದ ವಿರೋಧಿಗಳು ‘ ಮಕ್ಕಳ ಬುದ್ಧಿ ಕೆಡಿಸಿ ಶ್ರೀಗಳ ವಿರುದ್ಧ ದೂರು’ ನೀಡಿದ್ದಾರೆ ಎಂದು  ಮಾಧ್ಯಮಗಳಿಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ .

ಗ್ರಾಹಕರೇ ಗಮನಿಸಿ : ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು| Changes From 1st September

ಮಧ್ಯ ಕರ್ನಾಟಕದ ಪ್ರತಿಷ್ಠಿತ ಮಠ ಎನಿಸಿರುವ ಚಿತ್ರದುರ್ಗದ ಮುರುಘಾ ಶರಣರಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಕ್ಕಳು ಮೈಸೂರಿನಲ್ಲಿ ದೂರು ನೀಡಿರುವುದು ಮಾಧ್ಯಮ ಮೂಲಕ ತಿಳಿದಿದೆ. ಈ ವಿಚಾರದಲ್ಲಿ ಶರಣರಿಗೆ ನೋವಾಗಿದೆ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಈ ಕುರಿತು ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದರು.

ಗ್ರಾಹಕರೇ ಗಮನಿಸಿ : ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು| Changes From 1st September

ಮಠದ ವಿರೋಧಿ ಶಕ್ತಿಗಳು, ಅತಿಯಾದ ಆಸೆಯಿಂದ ಮಕ್ಕಳನ್ನು ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಶ್ರೀಗಳ ವಿರುದ್ಧ ಮಕ್ಕಳ ಬುದ್ಧಿ ಕೆಡಿಸಿ ದೂರು ಕೊಡಿಸಿದ್ದಾರೆ. ಅವರು ಮಠದಿಂದ ಹೊರೆಗೆ ಹೋಗಿ, ದೂರು ಸಲ್ಲಿಸಿದ್ದಾರೆ. ಈ ದೂರಿನ ವಿಚಾರ ಪೂರ್ಣವಾಗಿ ಗೊತ್ತಿಲ್ಲ. ಆದರೆ ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಗ್ರಾಹಕರೇ ಗಮನಿಸಿ : ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು| Changes From 1st September

ಮಠದ ಅಧೀನದಲ್ಲಿರೋ ಶಾಲಾ ಮಕ್ಕಳ ದುರ್ಬಳಕೆ ಮಾಡಿ ಶ್ರೀಗಳು ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜ.1, 2019ರಿಂದ ಜೂ.6, 2022ವರೆಗೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ಈ ಕೃತ್ಯ ಉಳಿದ ಆರೋಪಿಗಳು ಸಾಥ್ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗ್ರಾಹಕರೇ ಗಮನಿಸಿ : ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು| Changes From 1st September

Share.
Exit mobile version