ಬೆಂಗಳೂರು: ಮೆಡಿಕಲ್ ಕೌನ್ಸಿಲ್ ಕಮಿಟಿ (ಎಂಸಿಸಿ), ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದ ನಂತರ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಶನಿವಾರ ತಿಳಿಸಿದ್ದಾರೆ.
ನಿಗದಿಯಂತೆ ಎಂಸಿಸಿ ಫಲಿತಾಂಶ ಪ್ರಕಟಿಸಿದ್ದರೆ, ರಾಜ್ಯದಲ್ಲೂ ಇಂದಿನಿಂದ ಸೀಟು ಹಂಚಿಕೆಗೆ ಛಾಯ್ಸ್ ದಾಖಲಿಸಲು ಅವಕಾಶ ನೀಡಬೇಕಿತ್ತು. ಆದರೆ ಎಂಸಿಸಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಆ.11ರಂದು ಪ್ರಕಟಿಸುವುದಾಗಿ ಹೇಳಿರುವ ಕಾರಣಕ್ಕೆ ರಾಜ್ಯದಲ್ಲೂ ಆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಕೈ ಬಲಪಡಿಸಿ, ದೇಶದ್ರೋಹಿಗಳಿಗೆ ಪಾಠ ಕಲಿಸಿ: ಬೊಮ್ಮಾಯಿ ಕರೆ
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು