ಶಿವಮೊಗ್ಗ: ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ತೆರವಿಗೆ ಆದೇಶ ಹೊರಡಿಸಿತ್ತು. ಈ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕರೇ ವಿರೋಧಿಸಿದ್ದಾರೆ. ಅಲ್ಲದೇ ಜನೌಷಧಿ ಕೇಂದ್ರ ತರವಿಗೆ ನನ್ನದು ವಿರೋಧವಿದೆ ಎಂಬುದಾಗಿ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಕೊರೋನಾ, ಡೆಂಗ್ಯೂ ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರಗಳಿಂದ ಬಡವರಿಗೆ ಸಹಾಯವಾಗುತ್ತಿತ್ತು. ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಔಷಧಿ ಕೂಡ ಸಿಗುತ್ತಿದ್ದವು ಎಂದರು.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಇರುವುದು ಸೂಕ್ತವಾಗಿದೆ. ಇಂತಹ ಜನೌಷಧಿ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆ ಆವರಣದಿಂದ ತೆರವುಗೊಳಿಸುತ್ತಿರೋದಕ್ಕೆ ನನ್ನ ವಿರೋಧವಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾಗರದ ಸಾರ್ವಜನಿಕ ಆಸ್ಪತ್ರೆ ಮೂಲ ಸೌಕರ್ಯ ಅಭಿವೃದ್ಧಿಗೆ 1.70 ಕೋಟಿ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ 1.65 ಕೋಟಿ ಮಂಜೂರು ಮಾಡಲಾಗಿದೆ. ಸಾಗರ ತಾಲ್ಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು 70 ಕೋಟಿ ಮಂಜೂರಾಗಿದ್ದು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತ ತಕ್ಷಣ ಹಣ ಬಿಡುಗಡೆಯಾಗಲಿದೆ ಅಂತ ಹೇಳಿದರು.
ವರದಿ; ವಸಂತ ಬಿ ಈಶ್ವರಗೆರೆ..
ಶಿವಮೊಗ್ಗ: ಕೊರೋನಾ, ಡೆಂಗ್ಯೂ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ- ಶಾಸಕ ಗೋಪಾಲಕೃಷ್ಣ ಬೇಳೂರು
ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill