ದೆಹಲಿ: ಪ್ರತಿಪಕ್ಷಗಳಿಗೆ ದೇಶದ ಹಿತಾಸಕ್ತಿಗಿಂತ ತಮ್ಮ ರಾಜಕೀಯ ಹಿತಾಸಕ್ತಿಯೇ ಹೆಚ್ಚು ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷಗಳು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಹರ್ಮೋಹನ್ ಅವರ 10 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ವಿರೋಧ ಪಕ್ಷಗಳು ಅಧಿಕಾರದಲ್ಲಿದ್ದಾಗ ತೆಗೆದುಕೊಂಡ ನಿರ್ಧಾರಗಳನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ಅದನ್ನು ನಮ್ಮ ಸರ್ಕಾರವು ಅನುಷ್ಠಾನ ಮಾಡುತ್ತಿದೆ. ಇದಕ್ಕೂ ಪ್ರತಿಪಕ್ಷಗಳು ಅನೇಕ ಬಾರಿ ಅಡೆತಡೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಸಮಾಜ ಮತ್ತು ದೇಶದ ಹಿತಾಸಕ್ತಿಗಳಿಗಿಂತ ಸಿದ್ಧಾಂತ ಅಥವಾ ರಾಜಕೀಯ ಹಿತಾಸಕ್ತಿಗಳನ್ನು ಮೇಲಕ್ಕೆ ಇಡುವ ಪ್ರವೃತ್ತಿ ಕಂಡುಬರುತ್ತಿದೆ ಎಂದು ಪ್ರಧಾನಿ ಹೇಳಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾತುಗಳನ್ನು ನೆನಪಿಸಿಕೊಂಡ ಮೋದಿ, ಪಕ್ಷ ರಾಜಕಾರಣಕ್ಕಿಂತ ರಾಷ್ಟ್ರದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಪ್ರಜಾಪ್ರಭುತ್ವದಿಂದಾಗಿ ಪಕ್ಷಗಳು ಅಸ್ತಿತ್ವದಲ್ಲಿವೆ ಮತ್ತು ದೇಶದಿಂದಾಗಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ. ನಮ್ಮ ದೇಶದ ಬಹುತೇಕ ಪಕ್ಷಗಳು, ವಿಶೇಷವಾಗಿ ಎಲ್ಲಾ ಕಾಂಗ್ರೆಸ್ಸೇತರ ಪಕ್ಷಗಳು ಈ ಕಲ್ಪನೆಯನ್ನು ಅನುಸರಿಸಿವೆ. ತುರ್ತು ಪರಿಸ್ಥಿತಿಯಲ್ಲಿ ದೇಶದ ಪ್ರಜಾಪ್ರಭುತ್ವವನ್ನು ಹತ್ತಿಕ್ಕಿದಾಗ, ಸಂವಿಧಾನವನ್ನು ಉಳಿಸಲು ಎಲ್ಲಾ ಪ್ರಮುಖ ಪಕ್ಷಗಳು ಒಗ್ಗೂಡಿದವು ಎಂದು ಪ್ರಧಾನಿ ಹೇಳಿದರು
Big news: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ʻಸೋನಿಯಾ ಗಾಂಧಿʼಗೆ 2ನೇ ಸುತ್ತಿನ ವಿಚಾರಣೆ
BIGG NEWS : ರಾಜ್ಯದ ಉಪ ನೋಂದಣಿ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಗೆ `ಐಡಿ ಕಾರ್ಡ್’ ಕಡ್ಡಾಯ