ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.
ಸೋಮವಾರ ಮಧ್ಯಾಹ್ನ ಕಲಬುರಗಿ ರೈಲು ನಿಲ್ದಾಣದಲ್ಲಿ ಅಯೋಧ್ಯೆಗೆ ತೆರಳಲಿರುವ ಭಕ್ತರ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಅವರು ಆಳಂದ ಮತ್ತು ಅಫಜಲಪುರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ.
ಆಳಂದ ತಾಲ್ಲೂಕಿನ ಸರಸಂಬ ಗ್ರಾಮಕ್ಕೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಹನುಮಂತಪ್ಪ ಆಲೂರೆ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಆಲೂರೆ ಅವರ ಕುಟುಂಬ ಸದಸ್ಯರ ಜತೆ ಸಮಾಲೋಚನೆ ನಡೆಸಿ ಅವರಿಗೆ ಸಾಂತ್ವನ ಹೇಳಲಿದ್ದಾರೆ.
ಬಳಿಕ ಅಫಜಲಪುರ ತಾಲ್ಲೂಕಿನ ಸಾಗನೂರ ಗ್ರಾಮಕ್ಕೆ ತೆರಳಿ ಹತ್ಯೆಗೊಳಗಾಗಿರುವ ಬುಜೆಪಿ ಯುವ ಮೋರ್ಚಾ ಕಾರ್ಯಕರ್ತ ಗಿರೀಶ್ ಚಕ್ರ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಬಳಿಕ ಬಾಗಲಕೋಟಗೆ ತೆರಳಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಮಂಗಳವಾರ ಬೆಳಗಾವಿಗೆ ಪ್ರಯಾಣ ಬೆಳೆಸುವ ಅಶೋಕ್ ಅವರು ಸಂಜೆ ಕೆಎಲ್ ಇ ಜೀರಿಗೆ ಸಭಾಂಗಣದಲ್ಲಿ ನಡೆಯುವ ಪ್ರಬುದ್ಧರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಜತೆ ಪಾಲ್ಗೊಳ್ಳಲಿದ್ದಾರೆ.
BREAKING: ರಾಜಕೀಯಕ್ಕೆ ಗುಡ್‌ಬೈ ಹೇಳಿದ ಮಾಜಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್!
WTC – ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಭಾರತ – ಹಿಟ್‌ಮ್ಯಾನ್ ರೋಹಿತ್ ನಾಯಕತ್ವಕ್ಕೆ ಮೆಚ್ಚುಗೆ!