ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವಿಚಾರವಾಗಿ ಬಳ್ಳಾರಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್, ಸಿದ್ದರಾಮಯ್ಯ ಅವರಿಗೆ 14 ಸೈಟ್ ಅಷ್ಟೇ ಅಲ್ಲ 3000 ಕೋಟಿ ಕೂಡ ಲೆಕ್ಕಕ್ಕೆ ಇಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸರಣಿ ಆತ್ಮಹತ್ಯೆ ಭಾಗ್ಯ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಒಂದುವರೆ ವರ್ಷದಿಂದ ಕಾಂಗ್ರೆಸ್ ಸರ್ಕಾರ ಹಗರಣದಲ್ಲಿ ಮುಳುಗಿದೆ. ಸಿಎಂ ಸಿದ್ದರಾಮಯ್ಯ ನಾನು ತೆರೆದ ಪುಸ್ತಕ ಅಂತ ಹೇಳುತ್ತಾರೆ.
ಆದರೆ ತೆರೆದು ನೋಡಿದರೆ ಎಲ್ಲಾ ಕಪ್ಪು ಇದೆ. ಸಿಎಂ ಸಿದ್ದರಾಮಯ್ಯಗೆ 14 ಸೈಟ್ಗಳು ಯಾವ ಲೆಕ್ಕನೂ ಇಲ್ಲ. 3,000 ಕೋಟಿ ಹಣ ಅಂದರೆ ಸಿಎಂ ಸಿದ್ದರಾಮಯ್ಯಗೆ ಲೆಕ್ಕಾನೆ ಇಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ಲೂಟಿ ಮಾಡಿದ್ದಾರೆ.
ಎಸ್ ಟಿ ಸಮುದಾಯದ ಅಭಿವೃದ್ಧಿಗೆ ಇದ್ದಂತಹ ಹಣವನ್ನು ಲೂಟಿ ಮಾಡಿದ್ದಾರೆ 187 ಕೋಟಿ ಅಧಿಕ ಹಣ ಲೂಟಿಯಾಗಿದೆ ಅಂದರೆ 87 ಕೋಟಿ ಅಂತ ಹೇಳಿದರು ಕಾಂಗ್ರೆಸ್ ಸರ್ಕಾರ ಸರಣಿ ಆತ್ಮಹತ್ಯೆ ಭಾಗ್ಯ ನೀಡುತ್ತಿದೆ. ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ. ಅಬಕಾರಿ ಸಚಿವರನ್ನು ಕೇಳಿದರೆ ನನಗೆ ಗೊತ್ತಿಲ್ಲ ಅಂತ ಹೇಳುತ್ತಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಗ್ಯಾರಂಟಿಯೇ ಇಲ್ಲ ಮೂಡ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಕೊಡಲು ತಯಾರಿ ಮಾಡಿದ್ದಾರೆ ಎಂದು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.