ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ … Continue reading ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ