Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಸ್ಸಾಂ ವಿಧಾನಸಭಾ ಚುನಾವಣೆ 2026: ಏಪ್ರಿಲ್ 9ಕ್ಕೆ ಮತದಾನ; 126 ಕ್ಷೇತ್ರಗಳಿಗೆ ವೇಳಾಪಟ್ಟಿ ಪ್ರಕಟ

15/03/2026 4:45 PM

BREAKING: ಕರ್ನಾಟಕದ ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

15/03/2026 4:41 PM

BREAKING: ತಮಿಳುನಾಡು ವಿಧಾನಸಭಾ ಚುನಾವಣೆ 2026: ಏಪ್ರಿಲ್ 23ಕ್ಕೆ ಮತದಾನ; 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ

15/03/2026 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಎಂ ಸಿದ್ಧರಾಮಯ್ಯ’ ರಾಜೀನಾಮೆಗೆ ಪ್ರತಿಪಕ್ಷ ನಾಯಕ ‘ಆರ್.ಅಶೋಕ್’ ಒತ್ತಾಯ
KARNATAKA

‘ಸಿಎಂ ಸಿದ್ಧರಾಮಯ್ಯ’ ರಾಜೀನಾಮೆಗೆ ಪ್ರತಿಪಕ್ಷ ನಾಯಕ ‘ಆರ್.ಅಶೋಕ್’ ಒತ್ತಾಯ

By kannadanewsnow0905/01/2024 3:36 PM

ಬೆಂಗಳೂರು: ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಜೊತೆಗೆ ಈ ಕುರಿತು ಟ್ವೀಟ್‌ ಮಾಡಿದ್ದಾರೆ.

ಮುಖ್ಯಮಂತ್ರಿಯವರಿಗೆ ಒಂದೋ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈ ತಪ್ಪಿ, ಕಾಣದ ಕೈಗಳು ದಿಕ್ಕು ತಪ್ಪಿಸುತ್ತಿವೆ. ಇಲ್ಲವೆಂದರೆ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಇವೆರಡರಲ್ಲಿ ಯಾವುದು ಸತ್ಯವಾದರೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದರ್ಥ. ಆದ್ದರಿಂದ ಕೂಡಲೇ ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮಾಪಣೆ ಕೋರಿ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಶ್ರೀಕಾಂತ್ ಪೂಜಾರಿ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯ ಕಂಡಿದ್ದು, ಬಾಕಿ ಇರುವ ಒಂದು ಪ್ರಕರಣ ಸಹ 1992 ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು. ಆದರೆ ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ಅವರನ್ನು ಆ ಪ್ರಭು ಶ್ರೀರಾಮ ಕ್ಷಮಿಸುವುದಿಲ್ಲ ಎಂದರು.

ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಕರಾಳೆ ಛಾಯೆಯನ್ನು ಮೂಡಿಸುತ್ತಿದೆ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರನ್ನು ಮೆಚ್ಚಿಸಲು ಕರಸೇವಕರನ್ನು ಹುಡುಕಿ ಹಳೆಯ ಪ್ರಕರಣಗಳಲ್ಲಿ ಬಂಧಿಸಲಾಗುತ್ತಿದೆ. ಹುಬ್ಬಳ್ಳಿಯಂತೆಯೇ ಚಿಕ್ಕಮಗಳೂರು, ಕಲಬುರ್ಗಿ ಮೊದಲಾದ ಕಡೆಗಳಲ್ಲಿ ಹೀಗೆಯೇ ಆಗುತ್ತಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಸರ್ಕಾರ ಹೇರಿದೆ ಎಂದರು.

ರಾಮಭಕ್ತರ ಉತ್ಸಾಹ, ಮೆರವಣಿಗೆ, ಮಂತ್ರಾಕ್ಷತೆ ವಿತರಣೆ ಮೊದಲಾದವು ಕಾಂಗ್ರೆಸ್‌ ನಾಯಕರ ತಲೆ ಕೆಡುವಂತೆ ಮಾಡಿದೆ. ಕರಸೇವಕರನ್ನು ಬಂಧಿಸುವ ನೀಚತನವನ್ನು ಸರ್ಕಾರ ತೋರಿದೆ. ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್‌.ಯಡಿಯೂರಪ್ಪ, ಪಿ.ಸಿ.ಮೋಹನ್‌, ರವಿಕುಮಾರ್‌ ಸೇರಿದಂತೆ ನಾವೆಲ್ಲರೂ ಕರಸೇವಕರಾಗಿದ್ದು, ತಾಕತ್ತಿದ್ದರೆ ಸರ್ಕಾರ ನಮ್ಮನ್ನು ಬಂಧಿಸಲಿ. ರಾಜ್ಯದಲ್ಲಿ ಎಲ್ಲ ಜೈಲುಗಳನ್ನು ತೆರೆದು ನಮ್ಮೆಲ್ಲರನ್ನೂ ಕಳುಹಿಸಲಿ. ರಾಮಭಕ್ತರನ್ನು ತಡೆಯುವ ಶಕ್ತಿ ಇದೆಯೇ ಎಂಬುದನ್ನು ಸರ್ಕಾರ ತೋರಿಸಲಿ ಎಂದು ಸವಾಲೆಸೆದರು.

ಸಿಎಂ ಬಗ್ಗೆ ಅವಹೇಳನಕಾರಿ ಹೇಳಿಕೆ:’ಪ್ರತಿಪಕ್ಷ ನಾಯಕ’ ಅಶೋಕ್ ಸೇರಿ 42 ಬಿಜೆಪಿ ನಾಯಕರ ವಿರುದ್ಧ FIR ದಾಖಲು

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

BREAKING: ಅಸ್ಸಾಂ ವಿಧಾನಸಭಾ ಚುನಾವಣೆ 2026: ಏಪ್ರಿಲ್ 9ಕ್ಕೆ ಮತದಾನ; 126 ಕ್ಷೇತ್ರಗಳಿಗೆ ವೇಳಾಪಟ್ಟಿ ಪ್ರಕಟ

15/03/2026 4:45 PM3 Mins Read

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

15/03/2026 3:38 PM1 Min Read

BIG NEWS : ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನ : ಪಾಕ್ ಉಗ್ರನ ಹತ್ಯೆಗೈದ ಭಾರತೀಯ ಸೇನೆ

15/03/2026 3:29 PM1 Min Read
Recent News

BIG BREAKING: ಪುದುಚೇರಿ, ತಮಿಳುನಾಡು, ಅಸ್ಸಾಂ, ಕೇರಳ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ | Assembly Election 2026

15/03/2026 4:47 PM

BREAKING: ಅಸ್ಸಾಂ ವಿಧಾನಸಭಾ ಚುನಾವಣೆ 2026: ಏಪ್ರಿಲ್ 9ಕ್ಕೆ ಮತದಾನ; 126 ಕ್ಷೇತ್ರಗಳಿಗೆ ವೇಳಾಪಟ್ಟಿ ಪ್ರಕಟ

15/03/2026 4:45 PM

BREAKING: ಕರ್ನಾಟಕದ ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ

15/03/2026 4:41 PM

BREAKING: ತಮಿಳುನಾಡು ವಿಧಾನಸಭಾ ಚುನಾವಣೆ 2026: ಏಪ್ರಿಲ್ 23ಕ್ಕೆ ಮತದಾನ; 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ

15/03/2026 4:38 PM
State News
KARNATAKA

BREAKING: ಅಸ್ಸಾಂ ವಿಧಾನಸಭಾ ಚುನಾವಣೆ 2026: ಏಪ್ರಿಲ್ 9ಕ್ಕೆ ಮತದಾನ; 126 ಕ್ಷೇತ್ರಗಳಿಗೆ ವೇಳಾಪಟ್ಟಿ ಪ್ರಕಟ

By kannadanewsnow0915/03/2026 4:45 PM KARNATAKA 3 Mins Read

ದಿಸ್ಪುರ್: ಅಸ್ಸಾಂ ರಾಜ್ಯದ ಒಟ್ಟು 126 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದಾದ್ಯಂತ ಒಂದೇ…

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

15/03/2026 3:38 PM

BIG NEWS : ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನ : ಪಾಕ್ ಉಗ್ರನ ಹತ್ಯೆಗೈದ ಭಾರತೀಯ ಸೇನೆ

15/03/2026 3:29 PM

ಚಾಮರಾಜನಗರದಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

15/03/2026 3:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.