ಬೆಂಗಳೂರು : ನಾಳೆ ಅಯೋಧ್ಯೆಯಲ್ಲಿ ರಾಮಲೆಲ್ಲ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿದ್ದು ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರಕ್ಕೆ ಅಗ್ರಹಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಜೆ ಘೋಷಿಸುವಂತೆ ಎಲ್ಲರೂ ಮನವಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ.ದೆಹಲಿ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ಆದ್ದರಿಂದ ನಾಳೆ ರಾಜ್ಯಾದ್ಯಂತ ರಜೆ ಘೋಷಿಸುವಂತೆ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಶ್ರೀ ರಾಮನ ಬ್ಯಾನರ್ ಗಳನ್ನು ಹಾಕಿದರೆ ನಮ್ಮ ಕಾರ್ಯಕರ್ತರನ್ನು ಪೊಲೀಸರು ಬೆದರಿಸುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ? ನಿನ್ನೆ ಎಷ್ಟೇ ಹಾವೇರಿಯಲ್ಲಿ ಪ್ರತಿಭಟನೆಯನ್ನು ಮಾಡಿದ್ದೇವೆ.ಆಗಲೇ ಹಾವೇರಿಯಲ್ಲಿ ಮತ್ತೊಂದು ಘಟನೆ ನಡೆದಿದೆ ಸರ್ಕಾರದ ವಿರುದ್ಧ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.