ಬೆಂಗಳೂರು : ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆಯಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿರುವ ಬೆಂಗಳೂರು ಅರಮನೆ ಜಾಗದ ವ್ಯಾಜ್ಯದ ತ್ವರಿತ ವಿಚಾರಣೆಗೆ ಆಸಕ್ತಿ ತೋರುತ್ತಿದೆ.
ಇಬ್ಬರು ಹೊಸ ಚುನಾವಣಾ ಆಯುಕ್ತರ ನೇಮಕ:ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಸಮಾಧಾನ
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಿರ್ಮಾನಿಸಲಾಗಿದೆ. ಮುಂದಿನ ವಾರ ಪ್ರಕರಣ ವಿಚಾರಣೆಗೆ ಬರಲಿರುವುದರಿಂದ ಸೂಕ್ತ ವಕೀಲರ ನೇಮಕ ಮಾಡಿಸರ್ಕಾರದ ನಿಲುವಿಗೆ ಬದ್ದರಾಗುವಂತೆ ಮೂಲದಾವೆ ಪ್ರಕಾರ ಮುಂದುವರಿಯಲು ಸ್ವತಃ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯದುವೀರ್ ಒಡೆಯರ್ಗೆ ಬಿಜೆಪಿ ಮೈಸೂರು ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾ.18ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ‘2ನೇ ಪಟ್ಟಿ’ ಬಿಡುಗಡೆ ಸಾಧ್ಯತೆ : ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಈ ವಿಷಯದ ಕುರಿತಾಗಿ ವಿಪಕ್ಷ ನಾಯಕ ಆರ್ ಅಶೋಕ ಟ್ವೀಟ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್.ನಾಡು ಕಟ್ಟಿದ ದೊರೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಏಕವಚನ ಪ್ರಯೋಗ ಮಾಡಿದ್ದ ಸಿಎಂ ಸಿದ್ದರಾಮಯ್ಯ ನವರಿಗೆ ಜನಾನುರಾಗಿ ರಾಜಮನೆತನದ ಬಗ್ಗೆ ಎಷ್ಟು ದ್ವೇಷವಿದೆ ಎನ್ನುವುದು ಗುಟ್ಟೇನು ಅಲ್ಲ.
ಪರಿಶಿಷ್ಠ ಪಂಗಡದ ಯುವತಿ/ಯುವತಿಯರಿಗೆ ಗುಡ್‌ನ್ಯೂಸ್: ಕೌಶಲ್ಯಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನ!
ಈಗ ಯದುವಂಶದ ಕುಡಿ ಶ್ರೀ ಯದುವೀರ್ ಒಡೆಯರ್ ಅವರಿಗೆ ಮೈಸೂರಿನಿಂದ ಬಿಜೆಪಿ ಟಿಕೆಟ್ ಸಿಕ್ಕ ಕೂಡಲೇ ರಾಜಮನೆತನದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ನವರ ನಡೆ ನೋಡಿದರೆ ತವರು ಜಿಲ್ಲೆಯಲ್ಲೇ ಲೋಕಸಭೆ ಚುನಾವಣೆಯ ಸೋಲಾಗುತ್ತಿರುವುದು ಅವರ ನಿದ್ದೆ ಕೆಡಿಸಿದಂತಿದೆ.
ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್
ನಾಡು ಕಟ್ಟಿದ ದೊರೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಏಕವಚನ ಪ್ರಯೋಗ ಮಾಡಿದ್ದ ಸಿಎಂ @siddaramaiah ನವರಿಗೆ ಜನಾನುರಾಗಿ ರಾಜಮನೆತನದ ಬಗ್ಗೆ ಎಷ್ಟು ದ್ವೇಷವಿದೆ ಎನ್ನುವುದು ಗುಟ್ಟೇನು ಅಲ್ಲ.
ಈಗ ಯದುವಂಶದ ಕುಡಿ ಶ್ರೀ ಯದುವೀರ್ ಒಡೆಯರ್ ಅವರಿಗೆ ಮೈಸೂರಿನಿಂದ… pic.twitter.com/chDWO1OdSv
— R. Ashoka (ಮೋದಿ ಅವರ ಕುಟುಂಬ) (@RAshokaBJP) March 15, 2024