Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತಕ್ಕೆ ಬರುತ್ತಿದ್ದ ಹಡಗು ವಶಕ್ಕೆ ಪಡೆದಿದ್ದೇಕೆ? ಕೊನೆಗೂ ಮೌನ ಮುರಿದ ಇರಾನ್: ಅಧಿಕೃತ ಹೇಳಿಕೆ ಬಿಡುಗಡೆ!

22/04/2026 7:23 PM

ಸುಸ್ಥಿರತೆಯ ಹಾದಿಯಲ್ಲಿ ಭಾರತೀಯ ರೈಲ್ವೆ: ಪರಿಸರ ಸ್ನೇಹಿ ಪ್ರಯಾಣಕ್ಕೆ ‘ಹಸಿರು’ ಕಾಯಕಲ್ಪ

22/04/2026 7:14 PM

ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್!

22/04/2026 7:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ಸಿಡಿದೇಳಲಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ
KARNATAKA

ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ಸಿಡಿದೇಳಲಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ

By kannadanewsnow0929/11/2024 9:16 PM

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಸ್ವಾಮೀಜಿಯವರಿಗೆ ಧೈರ್ಯ ಹೇಳಿದ್ದೇವೆ ಹಾಗೂ ಒಕ್ಕಲಿಗ ಸಮಾಜದೊಂದಿಗೆ ನಾವಿದ್ದೇವೆ ಎಂದು ಹೇಳಿದ್ದೇವೆ. ವಕ್ಫ್ ಮಂಡಳಿ ಹಿಂದೂಗಳ, ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ನುಂಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಪಹಣಿ ಬದಲಿಸಲಾಗುತ್ತಿದೆ. ಹಿಂದೂಗಳಿಗಾಗುತ್ತಿರುವ ಅನ್ಯಾಯದ ವಿರುದ್ಧ ಅವರು ಮಾತನಾಡಿದ್ದು, ಬಳಿಕ ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ. ಇಷ್ಟಾದರೂ ಒಬ್ಬ ಮತಾಂಧ ದೂರು ನೀಡಿದ್ದಕ್ಕೆ ಅದರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರೆ ಸರ್ಕಾರಕ್ಕೆ ಎಷ್ಟು ಧೈರ್ಯ ಇದೆ ಎಂದು ಪ್ರಶ್ನಿಸಿದರು.

ಅಸಾದುದ್ಧೀನ್ ಓವೈಸಿ ದೇಶಕ್ಕೆ ಬೆದರಿಕೆ ಹಾಕುತ್ತಾರೆ. ಆಂಧ್ರಪ್ರದೇಶದಲ್ಲಿ ಮೌಲ್ವಿ ಸರ್ಕಾರಕ್ಕೆ ಬೆದರಿಕೆ ಹಾಕುತ್ತಾನೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಲೆ ಕೊಡಲ್ಲ ಎಂದು ಕೆಲವರು ಹೇಳುತ್ತಾರೆ. ದೇವೇಗೌಡರನ್ನೇ ಖರೀದಿ ಮಾಡುತ್ತೇನೆಂದು ಸಚಿವ ಜಮೀರ್ ಹೇಳಿದ್ದರು. ಆದರೆ ಸರ್ಕಾರ ಅದರ ವಿರುದ್ಧ ಕ್ರಮ ವಹಿಸಿಲ್ಲ. ಒಕ್ಕಲಿಗರ ವಿರುದ್ಧ ಕಾಂಗ್ರೆಸ್ ದ್ವೇಷ ಸಾಧಿಸುವುದು ಹೇಯ. ಸರ್ಕಾರ ಸ್ವಾಮೀಜಿಯವರನ್ನು ಮುಟ್ಟುವ ಕೆಲಸ ಮಾಡಿದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಎಚ್ಚರಿಕೆ ನೀಡಿದರು.

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರ ವಿರುದ್ಧ ಸರ್ಕಾರ ಕ್ರಮ ವಹಿಸಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಯಕ್ಕೆ ತಕ್ಕಂತೆ ಬದಲಾಗುತ್ತಾರೆ. ಒಮ್ಮೆ ಒಕ್ಕಲಿಗರ ಪರ ಮಾತಾಡಿದರೆ, ಮತ್ತೆ ಭಯೋತ್ಪಾದಕರನ್ನು ಬ್ರದರ್ ಎನ್ನುತ್ತಾರೆ. ಆದರೆ ಬಿಜೆಪಿ ಎಂದಿಗೂ ಹಿಂದೂಗಳ ಪರ ನಿಲ್ಲಲಿದೆ ಎಂದರು.

ಸ್ವಾಮೀಜಿಯವರಿಗೆ ತಿಳಿ ಹೇಳುವ ಬದಲು ಪೊಲೀಸರು ನೋಟಿಸ್ ನೀಡಿದ್ದಾರೆ. ಈಗ ಒಕ್ಕಲಿಗ ಸಮುದಾಯ ಎಚ್ಚೆತ್ತುಕೊಳ್ಳಬೇಕಿದೆ. ಸಮುದಾಯದ ವಿರುದ್ಧ ಸರ್ಕಾರ ಈ ರೀತಿ ದ್ವೇಷ ಕಾರುತ್ತಿರುವುದನ್ನು ಸಮುದಾಯದ ಜನರು ಗಮನಿಸಬೇಕಿದೆ. ಸ್ವಾಮೀಜಿಗೆ ಕಿರುಕುಳ ನೀಡಿದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದರು.

ರಾಜ್ಯದಲ್ಲಿ, ದೇಶದಲ್ಲಿ ಕೃಷಿ ಉತ್ಪಾದನೆ ಕುಸಿತಕ್ಕೆ ಮೋದಿ ಸರ್ಕಾರದ ಮುನ್ನುಡಿ: ಸಿಎಂ ಸಿದ್ಧರಾಮಯ್ಯ

ಬಸವಣ್ಣನನ್ನು ಅವಮಾನಿಸಿದ ಬಸನಗೌಡ ಯತ್ನಾಳ್ ಮಾತುಗಳನ್ನು ಕಟುವಾಗಿ ಖಂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ

Share. Facebook Twitter LinkedIn WhatsApp Email

Related Posts

ಸಾಗರ ಮೀನು ಮಾರುಕಟ್ಟೆಗೆ ಕಾಯಕಲ್ಪ: ಶೀಘ್ರದಲ್ಲೇ ಸುಸಜ್ಜಿತ ಮಳಿಗೆ ಲೋಕಾರ್ಪಣೆಯೆಂದ ಶಾಸಕರು

22/04/2026 6:54 PM2 Mins Read

ಸಾಗರದಲ್ಲಿ ‘ಹೈಟೆಕ್ ಸಬ್ ರಿಜಿಸ್ಟ್ರಾರ್ ಕಚೇರಿ’ ನಿರ್ಮಾಣ: ಶಾಸಕ ಗೋಪಾಲಕೃಷ್ಣ ಬೇಳೂರು

22/04/2026 6:20 PM2 Mins Read

BREAKING: ಈ ಬಾರಿ SSLC ಪರೀಕ್ಷೆಯ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಘೋಷಣೆ

22/04/2026 6:05 PM1 Min Read
Recent News

ಭಾರತಕ್ಕೆ ಬರುತ್ತಿದ್ದ ಹಡಗು ವಶಕ್ಕೆ ಪಡೆದಿದ್ದೇಕೆ? ಕೊನೆಗೂ ಮೌನ ಮುರಿದ ಇರಾನ್: ಅಧಿಕೃತ ಹೇಳಿಕೆ ಬಿಡುಗಡೆ!

22/04/2026 7:23 PM

ಸುಸ್ಥಿರತೆಯ ಹಾದಿಯಲ್ಲಿ ಭಾರತೀಯ ರೈಲ್ವೆ: ಪರಿಸರ ಸ್ನೇಹಿ ಪ್ರಯಾಣಕ್ಕೆ ‘ಹಸಿರು’ ಕಾಯಕಲ್ಪ

22/04/2026 7:14 PM

ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್!

22/04/2026 7:02 PM

‘ಮಮತಾ ಬ್ಯಾನರ್ಜಿ ನಡವಳಿಕೆಯಿಂದ ಪ್ರಜಾಪ್ರಭುತ್ವಕ್ಕೆ ಅಪಾಯ’: ಐ-ಪ್ಯಾಕ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಟು ಟೀಕೆ!

22/04/2026 6:59 PM
State News
KARNATAKA

ಸಾಗರ ಮೀನು ಮಾರುಕಟ್ಟೆಗೆ ಕಾಯಕಲ್ಪ: ಶೀಘ್ರದಲ್ಲೇ ಸುಸಜ್ಜಿತ ಮಳಿಗೆ ಲೋಕಾರ್ಪಣೆಯೆಂದ ಶಾಸಕರು

By kannadanewsnow0922/04/2026 6:54 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೃಷ್ಣರಾಜೇಂದ್ರ ಮೀನು ಮತ್ತು ಮಾಂಸ ಮಾರುಕಟ್ಟೆಯನ್ನು ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಶೀಘ್ರವೇ…

ಸಾಗರದಲ್ಲಿ ‘ಹೈಟೆಕ್ ಸಬ್ ರಿಜಿಸ್ಟ್ರಾರ್ ಕಚೇರಿ’ ನಿರ್ಮಾಣ: ಶಾಸಕ ಗೋಪಾಲಕೃಷ್ಣ ಬೇಳೂರು

22/04/2026 6:20 PM

BREAKING: ಈ ಬಾರಿ SSLC ಪರೀಕ್ಷೆಯ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಘೋಷಣೆ

22/04/2026 6:05 PM

ಸಾಗರದಲ್ಲಿ ‘ಲಯನ್ಸ್ ಕ್ಲಬ್’ನಿಂದ ವಿಶೇಷ ಚೇತನರಿಗೆ ₹3 ಕೋಟಿ ವೆಚ್ಚದ ಸಾಧನಾ ಸಲಕರಣೆ ವಿತರಣೆ; ಅಧ್ಯಕ್ಷ ಡಾ.ಪ್ರಸನ್ನ.ಟಿ

22/04/2026 5:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.