ನವದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ(Margaret Alva) ಅವರು ಇಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಮಾರ್ಗರೆಟ್ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಇತರ ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಉಪರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯಾಗಿ ರಾಜಸ್ಥಾನದ ಮಾಜಿ ರಾಜ್ಯಪಾಲ ಮತ್ತು ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವ ಅವರನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳು ಭಾನುವಾರ ನಿರ್ಧರಿಸಿವೆ. ಆಗಸ್ಟ್ 6 ರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನಾಂಕವಾಗಿದೆ.
ಉಪರಾಷ್ಟ್ರಪತಿ ಹುದ್ದೆಗೆ ನಮ್ಮ ಜಂಟಿ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಅವರನ್ನು ಕಣಕ್ಕಿಳಿಸಲು ನಾವು ಸರ್ವಾನುಮತದಿಂದ ನಿರ್ಧರಿಸಿದ್ದೇವೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಘೋಷಿಸಿದ್ದಾರೆ. ಅಭ್ಯರ್ಥಿಯನ್ನು ಆಯ್ಕೆ ಮಾಡಲು ಶರದ್ ಪವಾರ್ ಅವರ ನಿವಾಸದಲ್ಲಿ ವಿರೋಧ ಪಕ್ಷದ ನಾಯಕರು ಸಭೆ ನಡೆಸಿದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ.
ಇನ್ ಸ್ಟಾಗ್ರಾಮ್ ಮತ್ತೊಮ್ಮೆ ಡೌನ್? ಟ್ವಿಟ್ಟರ್ ನಲ್ಲಿ ತಮಾಷೆಯ ಸಂದೇಶಗಳೊಂದಿಗೆ ನೆಟ್ಟಿಗರ ಟ್ರೆಂಡ್
Shocking; ʻಮಂಕಿಪಾಕ್ಸ್ʼ ಬಾಧಿಸಿದ ಐವರಲ್ಲಿ ಮೂವರು ಪುರುಷರು ʻಗೇ ಸೆಕ್ಸ್ʼಗೆ ಒಳಗಾದವರು: WHO