ಬೆಂಗಳೂರು: ರಾಜ್ಯದ 13 ಸಾವಿರ ಸರ್ಕಾರಿ ನೌಕರರಿಗೆ ಒಪಿಎಸ್ ಗ್ಯಾರಂಟಿಯನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿದ್ದು, ಸುಮಾರು 13 ಸಾವಿರ ನೌಕರರನ್ನು ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿದ್ದೇವೆ. ಇದರಿಂದಾಗಿ ಅಷ್ಟೂ ನೌಕರರ ಕುಟುಂಬಗಳಿಗೆ ನೆಮ್ಮದಿ ಸಿಗಲಿದೆ ಎಂದು ಭಾವಿಸಿದ್ದೇನೆ ಅಂತ ಹೇಳಿದ್ದಾರೆ.
2006 ಏಪ್ರಿಲ್ 4ಕ್ಕಿಂತ ಪೂರ್ವದಲ್ಲಿ ಹೊರಡಿಸಿದ್ದ ಅಧಿಸೂಚನೆ ಅನ್ವಯ ನೇಮಕಾತಿಗೆ ಅರ್ಜಿ ಸಲ್ಲಿಸಿ, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿ ನೇಮಕಾತಿ ಆದೇಶ ಪಡೆದಿದ್ದ 11,366 ನೌಕರರನ್ನು ರಾಜ್ಯ ಸರ್ಕಾರ ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ (ಒಪಿಎಸ್) ಸೇರಿಸಿ ಆದೇಶ ಹೊರಡಿಸಿದೆ ಎಂದಿದ್ದಾರೆ.
ಹಾಗೆಯೇ ಏಪ್ರಿಲ್ 1, 2006ರ ಪೂರ್ವದಲ್ಲಿ ಸರ್ಕಾರಿ ಹುದ್ದೆಗೆ ಆಯ್ಕೆಯಾಗಿ, ನಂತರ ಇತರೆ ಇಲಾಖೆಯ ಬೇರೆ ಹುದ್ದೆಗಳಿಗೆ ಮರು ಆಯ್ಕೆಯಾದವರೂ ಹಳೇ ಪಿಂಚಣಿ ಯೋಜನೆ ಆಯ್ಕೆ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅವಕಾಶ ನೀಡಿದೆ. ಇದರಿಂದ ಸುಮಾರು 13 ಸಾವಿರ ನೌಕರರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.
2006 ಏಪ್ರಿಲ್ 4ಕ್ಕಿಂತ ಪೂರ್ವದಲ್ಲಿ ಹೊರಡಿಸಿದ್ದ ಅಧಿಸೂಚನೆ ಅನ್ವಯ ನೇಮಕಾತಿಗೆ ಅರ್ಜಿ ಸಲ್ಲಿಸಿ, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿ ನೇಮಕಾತಿ ಆದೇಶ ಪಡೆದಿದ್ದ 11,366 ನೌಕರರನ್ನು ರಾಜ್ಯ ಸರ್ಕಾರ ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ (ಒಪಿಎಸ್) ಸೇರಿಸಿ ಆದೇಶ ಹೊರಡಿಸಿದೆ.
ಹಾಗೆಯೇ ಏಪ್ರಿಲ್ 1, 2006ರ ಪೂರ್ವದಲ್ಲಿ ಸರ್ಕಾರಿ ಹುದ್ದೆಗೆ… pic.twitter.com/jZvoy2UF7s
— DIPR Karnataka (@KarnatakaVarthe) January 25, 2024
BIG UPDATE: ಬೆಂಗಳೂರಲ್ಲಿ ‘ಪ್ರೀ ಸ್ಕೂಲ್’ ನಿರ್ಲಕ್ಷ್ಯಕ್ಕೆ 4 ವರ್ಷದ ‘ಪುಟ್ಟ ಕಂದಮ್ಮ’ ಬಲಿ