ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದ ಟೈರ್ ತಯಾರಿಕಾ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 12 ಗಂಟೆಗಳ ನಂತರವೂ ಅದನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಗ್ನಿಶಾಮಕ ಇಲಾಖೆ ಶನಿವಾರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ.
ಸೂರಜ್ಪುರ ಪೊಲೀಸ್ ಠಾಣೆ ಪ್ರದೇಶದ ಎಂಆರ್ಎಲ್ ಟೈರ್ಸ್ ಕಾರ್ಖಾನೆಯಲ್ಲಿ ಶುಕ್ರವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಶೇಕಡಾ 80 ರಷ್ಟು ಬೆಂಕಿಯನ್ನು ನಿಯಂತ್ರಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಿಟಿಐ ವರದಿ ಮಾಡಿದೆ.