ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದಲ್ಲದೇ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ ಐದು ದಿನ ಆರೆಂಜ್ ಅಲರ್ಟ್ ಕೊಟ್ಟಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಾಮರಾಜನಗರದಲ್ಲಿ ಸೋಮವಾರ ಆರೆಂಜ್ ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಾವಣಗೆರೆಯಲ್ಲಿ ಇಂದು ಮತ್ತೆ ನಾಳೆ ಮತ್ತು ಮೇ 22 ರಂದು, ಮಂಡ್ಯದಲ್ಲಿ ಮೂರು ದಿನ ಮತ್ತು ಮೇ 23 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೈಸೂರಿನಲ್ಲಿ ಸೋಮವಾರ ಆರೆಂಜ್ ನಂತರದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಮನಗರ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮತ್ತು ತುಮಕೂರಿನಲ್ಲಿ ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇಲಾಖೆ ತಿಳಿಸಿದೆ.