ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಲಾರ, ವಿಜಯನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಿಸಿ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀನೆ ಮಾಡಲು ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ.
ಕೋಲಾರ ಜಿಲ್ಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಐಎಎಸ್ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇನ್ನೂ ವಿಜಯನಗರ ಜಿಲ್ಲೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಕೆ.ಜಿ ಜಗದೀಶ್ ಅವರನ್ನು, ದಕ್ಷಿಣ ಕನ್ನಡ ಜಿಲ್ಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ ಅವರನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ ಸಿದ್ಧಪಡಿಸಿ: ಗ್ರಾ.ಪಂ.ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT