ವರದಿ; ವಸಂತ ಬಿ ಈಶ್ವರಗೆರೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 101 ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಮಹತ್ವದ ಆದೇಶವನ್ನು ಮಾಡಿದೆ.
ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ವರ್ಗಾವಣೆ ಆದೇಶ ಮಾಡಿದ್ದು, ಬಾಗಲಕೋಟೆ ವಲಯ ಅರಣ್ಯಾಧಿಕಾರಿಯಾಗಿದ್ದಂತ ಮಹೇಂದ್ರ ದೇಸಾಯಿ ಅವರನ್ನು ಬೆಳಗಾವಿ ವಲಯ ಅರಣ್ಯಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಶಿವಪುತ್ರ ಶಂಕರ ತಳವಾರ ಅವರನ್ನು ಬೆಳಗಾವಿಯ ಗುಜನಾಳ ವಲಯ ಅರಣ್ಯಾಧಿಕಾರಿಯಾಗಿ, ಪಂಚಾಕ್ಷರಯ್ಯ ಪುರಾಣಿಕಮಠ ಅವರನ್ನು ಬೆಳಗಾವಿ ಕಾರ್ಯಯೋಜನೆ ಘಟಕದ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಸೊರಬ ವಲಯ ಅರಣ್ಯಾಧಿಕಾರಿಯಾಗಿದ್ದಂತ ಜಾವೇದ್ ಬಾಷ ಅಂಗಡಿ ಅವರನ್ನು ಶಿರಾಳಕೊಪ್ಪ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಸೊರಬ ವಲಯ ಅರಣ್ಯಾಧಿಕಾರಿಯಾಗಿ ಕೋಗಾರು ಶರಾವತಿ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಯಾಗಿದ್ದಂತ ಶ್ರೀಪಾದ ಈರ ನಾಯ್ಕ್ ಅವರನ್ನು ನೇಮಕ ಮಾಡಲಾಗಿದೆ.
ಕಾರ್ಗಲ್ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಸಂತೋಷ್ ಎಂ ಪವಾರ ಅವರನ್ನು ಯಲ್ಲಾಪುರ ವಿಭಾಗದ ಕಿರವತ್ತಿಯ ಸರ್ಕಾರಿ ಮರಮುಟ್ಟು ಸಂಗ್ರಹಾಲಯದ ವಲಯ ಅರಣ್ಯಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಹೀಗಿದೆ 101 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ ಪಟ್ಟಿ