ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆಯ ಅಸ್ತ್ರವನ್ನು ಪ್ರಯೋಗಿಸಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಸುಗ್ರೀವಾಜ್ಞೆಗೆ ಒಪ್ಪಿಗೆ ಕೂಡ ನೀಡಲಾಗಿದೆ. ಇದಕ್ಕಾಗಿ ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಎಲ್ಲವೂ ಫೈನಲ್ ಆಗಲಿದೆ.
ಈ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸಂಬಂಧ ಸುಗ್ರೀವಾಜ್ಞೆಗೆ ಇಂದಿನ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಕೆಲ ಅಂಶಗಳ ಕುರಿತಂತೆ ಚರ್ಚಿಸಲು ಇಂದು ಸಂಜೆ 4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು.
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಲು ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಪುಟವು ಪರಮಾಧಿಕಾರ ನೀಡಿದೆ. ಹಿರಿಯ ಸಚಿವರು, ಶಾಸಕರ ನೇತೃತ್ವದಲ್ಲಿ ನಡೆಯುವಂತ ಇಂದಿನ ಸಭೆಯಲ್ಲಿ ಕೆಲ ಅಂಶಗಳ ಕುರಿತಂತೆ ಚರ್ಚ ನಡೆದು, ಅಂತಿಮ ನಿರ್ಧಾರ ಹೊರ ಬೀಳಲಿದೆ ಎಂಬುದಾಗಿ ತಿಳಿಸಿದರು.
ಡಿಜಿಟಲ್ ಪಾವತಿ ವರ್ಷದಿಂದ ವರ್ಷಕ್ಕೆ ಎರಡಂಕಿ ಏರಿಕೆ: RBI | Digital Payments
BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಾಯಚೂರಲ್ಲಿ ಕತ್ತು ಸೀಳಿ MSC ವಿದ್ಯಾರ್ಥಿನಿಯ ಬರ್ಬರ ಹತ್ಯೆ!