ಹುಬ್ಬಳ್ಳಿ : ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಧ್ಯಾದೇಶ ಹೊರಡಿಸಲು ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸುಗ್ರೀವಾಜ್ಞೆ ಗೆ ಮುಂದಿನ ಅಧಿವೇಶನದಲ್ಲಿ ಎರಡೂ ಸದನಗಳ ಅನುಮೋದನೆಯನ್ನು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಹಳಿ ತಪ್ಪಿದ ಗೂಡ್ಸ್ ರೈಲು : ಪ್ರಯಾಣಿಕರೇ ಗಮನಿಸಿ ; ಆರು ರೈಲುಗಳ ಸಂಚಾರ ರದ್ದು
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ವರ್ಗಗಳಿಗೆ ಕಾನೂನಿನ ರಕ್ಷಣೆಯನ್ನು ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಆಯೋಗಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
Firecrackers Safety Tips: ನಿಮ್ಮ ‘ದೀಪಾವಳಿ ಸಂಭ್ರಮ’ದಲ್ಲಿ ತಪ್ಪದೇ ಈ ‘ಸುರಕ್ಷತಾ ಕ್ರಮ’ ಅನುಸರಿಸಿ
ಯಾವುದೇ ವರ್ಗದ ಮೀಸಲಾತಿ ತೆಗೆಯುವುದಾಗಲಿ, ಸೇರ್ಪಡೆ ಮಾಡುವುದರ ಬಗ್ಗೆಯಾಗಲೀ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಏಕೆಂದರೆ ಏನೇ ಮಾಡಿದರೂ ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನಲ್ಲಿಯೇ ಮಾಡಬೇಕು. ಮೀಸಲಾತಿ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಸರ್ಕಾರದ ಮುಖ್ಯಸ್ಥನಾಗಿ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಮುಂದುವರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
BREAKING NEWS : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ದಿನವೇ ದುರಂತ : ಫ್ಲೈಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು