ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರವನ್ನು ತೆರೆಯಲು ನಿರ್ಧರಿಸಲಾಗಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅಂಗಾಂಗ ದಾನ ಪ್ರಕ್ರಿಯೆ ಸರಳೀಕರಿಸಲು ರಾಜ್ಯದ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ತೆರೆದು ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಅಂಗಾಂಗ ದಾನ ಪ್ರಕ್ರಿಯೆ ಸರಳೀಕರಿಸಲು ರಾಜ್ಯದ ಎಲ್ಲ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಅಂಗಾಂಗ ದಾನ ಸ್ವೀಕರಣಾ ಕೇಂದ್ರ ತೆರೆದು ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.@CMofKarnataka @siddaramaiah @DKShivakumar @dineshgrao @DHFWKA pic.twitter.com/sJufm1HUMh
— DIPR Karnataka (@KarnatakaVarthe) August 2, 2025
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ 24×7 ಸೇವೆ ದೊರೆಯುವ ನಿಟ್ಟಿನಲ್ಲಿ ತಲಾ ಒಬ್ಬರು ಸ್ತ್ರೀ ರೋಗ ತಜ್ಞರು, ಅರಿವಳಿಕೆ ತಜ್ಞರು ಹಾಗೂ ಒಬ್ಬರು ಅಥವಾ ಇಬ್ಬರು ಮಕ್ಕಳ ತಜ್ಞರು ಕಡ್ಡಾಯವಾಗಿ ಇರುವಂತೆ ಮಾಡಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್