ನವದೆಹಲಿ : ಚೀನಾದಲ್ಲಿ ಮತ್ತೆ ಕೊರೊನಾ ರಣಕೇಕೆ ಬೆನ್ನಲ್ಲೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ (Mansukh Mandaviya) ಬುಧವಾರ ದೆಹಲಿಯಲ್ಲಿ ತಜ್ಞರ ತಂಡದೊಂದಿಗೆ ಸಭೆ ನಡೆಸಿದ್ದಾರೆ ಸಭೆಯಲ್ಲಿ ಕೊರೋನಾ ಇನ್ನೂ ಮುಗಿದಿಲ್ಲ, ಜನಸಂದಣಿ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಎಂದು ಸಲಹೆಯನ್ನು ನೀಡಿದ್ದಾರೆ
ಚೀನಾ, ದಕ್ಷಿಣ ಕೊರಿಯಾ, ಅಮೆರಿಕ, ಜಪಾನ್ ಮತ್ತು ಬ್ರೆಜಿಲ್ನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಬೆನ್ನಲ್ಲೆ ಆರೋಗ್ಯ ಬಿಕ್ಕಟ್ಟು ತಪ್ಪಿಸೋದಕ್ಕೆ ಸಭೆ ನಡೆಸಲು ಮುಂದಾಗಿದೆ.
Delhi | Union Health Minister Mansukh Mandaviya chairs a meeting with health officials over the #COVID19 situation pic.twitter.com/qrD4EyczUO
— ANI (@ANI) December 21, 2022
ಈ ಸಭೆಯಲ್ಲಿ ಆರೋಗ್ಯ ಮತ್ತು ಆಯುಷ್ ಸಚಿವಾಲಯದ ಕಾರ್ಯದರ್ಶಿಗಳು, ಫಾರ್ಮಸ್ಯುಟಿಕಲ್ಸ್ ಮತ್ತು ಬಯೋಟೆಕ್ನಾಲಜಿ ವಿಭಾಗ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನಿರ್ದೇಶಕ ರಾಜೀವ್ ಬೇಲ್, ನೀತಿ ಆಯೋಗ (ಆರೋಗ್ಯ) ಸದಸ್ಯ ವಿ.ಕೆ ಪೌಲ್ ಮತ್ತು ನ್ಯಾಷನಲ್ ಟೆಕ್ನಿಕಲ್ ಅಡ್ವಸರಿ ಗ್ರೂಪ್ ಆನ್ ಇಮ್ಯುನೈಜೇಷನ್ ಅಧ್ಯಕ್ಷ ಎನ್.ಎಲ್ ಆರೋರಾ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು
ಇಂದಿನ ಸಭೆಯ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಟ್ವೀಟ್ ಮಾಡಿದ್ದು, ಕೊರೋನಾ ಇನ್ನೂ ಮುಗಿದಿಲ್ಲ. ಆಯಾ ರಾಜ್ಯಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಎಲ್ಲರಿಗೂ ಎಚ್ಚರಿಕೆಯನ್ನು ನೀಡುವಂತೆ ಸೂಚಿಸುತ್ತೇನೆ. ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜಾಗಿರಬೇಕು ಎಂದು ತಿಳಿಸಿದ್ದಾರೆ.
In view of the rising cases of #Covid19 in some countries, reviewed the situation with experts and officials today.
COVID is not over yet. I have directed all concerned to be alert and strengthen surveillance.
We are prepared to manage any situation. pic.twitter.com/DNEj2PmE2W
— Dr Mansukh Mandaviya (@mansukhmandviya) December 21, 2022
ಕೋವಿಡ್ ಕುರಿತ ರಾಷ್ಟ್ರೀಯ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಎನ್ಐಟಿಐ ಆಯೋಗದ ಸದಸ್ಯ ವಿಕೆ ಪಾಲ್ ಮಾತನಾಡಿ, ಯಾರೂ ಭಯಪಡುವ ಅಗತ್ಯವಿಲ್ಲ. ಸಾಕಷ್ಟು ಟೆಸ್ಟ್ಗಳನ್ನು ನಡೆಸಲಾಗುತ್ತಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಎಲ್ಲರೂ ಮಾಸ್ಕ್ ಧರಿಸಬೇಕು ಎಂದ ಅವರು, ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಇನ್ನೂ ಯಾವುದೇ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದರು
ಇದಕ್ಕೂ ಮುನ್ನ, ಪರಿಶೀಲನಾ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎಂದು ಮೂಲಗಳು ತಿಳಿಸಿವೆ. ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಮಾರ್ಗಸೂಚಿಗಳನ್ನು ಹಾಕುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವುದು ಹಾಗೂ ಮುಂಬರುವ ಹೊಸ ವರ್ಷಾಚರಣೆಯಲ್ಲಿ ಕೊರೊನಾ ಹೆಚ್ಚಳವಾಗದಂತೆ ತಡೆಗಟ್ಟಲು ಮಾರ್ಗಸೂಚಿಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದಿದ್ದಾರೆ
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,408 ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ 0.01% ರಷ್ಟಿವೆ. ಕೇಂದ್ರ ಸರ್ಕಾರವು ಮಂಗಳವಾರ ರಾಜ್ಯಗಳು ಜಾಗರೂಕರಾಗಿರಬೇಕು ಮತ್ತು ಕೋವಿಡ್ ಪ್ರಕರಣಗಳ ಕಣ್ಗಾವಲು ಹೆಚ್ಚಿಸುವಂತೆ ಕೇಳಿಕೊಂಡಿದೆ.