ಬೆಂಗಳೂರು: ನಗರದಲ್ಲಿ 25,000 ಕೋಟಿ ವೆಚ್ಚದಲ್ಲಿ ಒ ಆರ್ ಆರ್, ಬ್ಯುಸಿನೆಸ್ ಕಾರಿಡಾರ್ ಅನುಷ್ಠಾನಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
ಸುಮಾರು ₹25,000 ಕೋಟಿ ಅಂದಾಜು ವೆಚ್ಚದಲ್ಲಿ ಬೆಂಗಳೂರು ಹೊರವರ್ತುಲ ರಸ್ತೆ ಯೋಜನೆ ಮತ್ತು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದ್ದು, ಈ ಯೋಜನೆಗೆ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.@CMofKarnataka @siddaramaiah @HKPatilINC pic.twitter.com/FLFNjRbjUW
— DIPR Karnataka (@KarnatakaVarthe) September 9, 2024
ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆಯಾದ ಶಕ್ತಿ ಯೋಜನೆಯಡಿ 285 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ಪಾರಂಪರಿಕ ಮತ್ತು ಶ್ರದ್ಧಾ ಪ್ರವಾಸೋದ್ಯಮದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ ಎಂದು ಮಾನ್ಯ ಸಚಿವರು ವಿವರಿಸಿದರು.
ಕರ್ನಾಟಕದ 5 ಪಾರಂಪರಿಕ ತಾಣಗಳನ್ನು ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರ್ಪಡೆಯಾಗಿದ್ದು ಡೆಕ್ಕನ್ ಸುಲ್ತನೇಟ್‌ನ ಕೋಟೆಗಳು, ಶ್ರೀರಂಗಪಟ್ಟಣದ ಸ್ಮಾರಕಗಳು, ಐಹೊಳೆ-ಬಾದಾಮಿಯ ಮಂದಿರಗಳ ಶಿಲ್ಪಕಲೆ, ಹಿರೆಬೆಣಕಲ್‌ನ ಮೆಗಾಲಿಟಿಕ್ ಸೈಟ್ ಮತ್ತು ಬೀದರ್‌ನ ಕರೇಜ್ ವ್ಯವಸ್ಥೆ ಹಾಗೂ ಲಕ್ಕುಂಡಿಯ ಪಾರಂಪರಿಕ ಶಿಲ್ಪಕಲಾ ವೈಭವಗಳು ಯುನೆಸ್ಕೋದ ವಿಶ್ವಪಾರಂಪರಿಕ ತಾಣಗಳ ಪಟ್ಟಿಗಳಿಗೆ ಸೇರಬೇಕೆಂದು ಕರ್ನಾಟಕದ ಉತ್ಕಟವಾದ ಬಯಕೆಯಾಗಿದೆ. ಇಂಥ ತಾಣಗಳನ್ನು ಯುನೆಸ್ಕೋ ತಾಣಗಳಿಗೆ ಸೇರಿಸಬೇಕೆಂದು ಕೇಂದ್ರ ಸರ್ಕಾರ ಅಗತ್ಯದ ಬೆಂಬಲ ನೀಡಬೇಕೆಂದು ವಿನಂತಿಸಿದರು.
ಕರ್ನಾಟಕದ ಹೊಸ ಪ್ರವಾಸೋದ್ಯಮ ನೀತಿ 2024-29 ಎಲ್ಲ ವರ್ಗದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲು ಪರಿಷ್ಕೃತವಾದ ಮಹತ್ವವನ್ನು ಮತ್ತು ಒತ್ತು ನೀಡಲು ಪ್ರತಿಯೊಬ್ಬ ಪ್ರವಾಸಿಗನ ಸಂತಸಮಯ ಕ್ಷಣಗಳನ್ನು ಕಳೆಯಲು ಹಾಗೂ ಆರ್ಥಿಕ ವೃದ್ಧಿ ಮಾಡುವ ದಿಸೆಯಲ್ಲಿ ಮಹತ್ವದ ಹೆಜ್ಜೆಗಳನ್ನಿರಿಸುತ್ತದೆ ಎಂದು ಸಚಿವರು ಹೇಳಿದರು.
ಏನಿದು ‘ನಿಪುಣ ಕರ್ನಾಟಕ’ ಯೋಜನೆ? ಜಾರಿಯಿಂದ ಪ್ರಯೋಜನ ಏನು? ಇಲ್ಲಿದೆ ಪುಲ್ ಡೀಟೆಲ್ಸ್ | Nipuna Karnataka Scheme
BIG NEWS : ನನಗೂ ‘ಸಿಎಂ’ ಆಗುವ ಆಸೆ ಇದೆ ಆದರೆ…?: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್!
ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಸಂಸದ ಬೊಮ್ಮಾಯಿ ಭವಿಷ್ಯ