Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಸರ್ಕಾರ ರೈತರ ರಕ್ಷಣೆಗೆ ಬದ್ಧ, ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಸಿಎಂ ಡಿಕೆಶಿ ಭರವಸೆ
KARNATAKA

ನಮ್ಮ ಸರ್ಕಾರ ರೈತರ ರಕ್ಷಣೆಗೆ ಬದ್ಧ, ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಸಿಎಂ ಡಿಕೆಶಿ ಭರವಸೆ

By kannadanewsnow09

ಹುಬ್ಬಳ್ಳಿ : “ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, “ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟೀಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ.

“ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಜನ ಬಹಳ ಬುದ್ಧಿವಂತರು ಅವರಿಗೆ ಜನ ತಕ್ಕ ರೀತಿ ಪಾಠ ಕಲಿಸಲಿದ್ದಾರೆ. ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ” ಎಂದರು.

“ಜೆಪಿಸಿ ರಾಜ್ಯದ ವಿಚಾರಕ್ಕೆ ಭೇಟಿ ನೀಡುವ ಅಧಿಕಾರವಿಲ್ಲ. ಜೆಸಿಪಿ ರಾಜ್ಯಕ್ಕೆ ಭೇಟಿ ನೀಡುವುದಾದರೆ ಸರ್ಕಾರ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಡೀ ಸಮಿತಿ ತಂಡ ಭೇಟಿ ನೀಡಬೇಕು. ಕೇವಲ ಸಮಿತಿ ಅಧ್ಯಕ್ಷರು ಬಂದಿದ್ದಾರೆ ಎಂದರೆ ಅವರು ಪಕ್ಷದ ಕೆಲಸಕ್ಕಾಗಿ ಬಂದಿದ್ದಾರೆ. ಅವರು ಸಂಸದರಾದ ಬೊಮ್ಮಾಯಿ ಹಾಗೂ ಸಚಿವ ಸೋಮಣ್ಣ ಅವರ ಜತೆ ಬಂದಿದ್ದಾರೆ. ಇವರಿಬ್ಬರು ಜೆಪಿಸಿ ಸದಸ್ಯರೇ? ಭೇಟಿ ನೀಡಿರುವವರು ಕೇವಲ ಬಿಜೆಪಿ ಸದಸ್ಯರು ಮಾತ್ರ, ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದಾರೆ. ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ. ಅವರು ಏನಾದರೂ ರಾಜಕೀಯ ಮಾಡಲಿ. ಸತ್ಯಾಂಶವೇ ಬೇರೆ” ಎಂದು ತಿಳಿಸಿದರು.

ಶಿವಕುಮಾರ್ ಮುಂದೆ ಯಾಕೆ ತಗ್ಗಿಬಗ್ಗಿ ನಡೆಯಬೇಕು ಎಂಬ ಆರ್.ಅಶೋಕ್ ಅವರ ಟ್ವೀಟ್ ಬಗ್ಗೆ ಕೇಳಿದಾಗ, “ನಾನು ಅವರ ವಿಚಾರ ಮಾತನಾಡಿಲ್ಲ. ನಾನು ಜಯನಗರ ಕ್ಷೇತ್ರದ ಅನುದಾನ ವಿಚಾರವಾಗಿ ಸಂಸದ ಸೂರ್ಯ ಅವರ ಜತೆ ಚರ್ಚೆ ಮಾಡಿದ್ದೇನೆ. ಅಲ್ಲಿನ ಶಾಸಕರು ನಾನು ಸಚಿವನಾದ ನಂತರ ಬೆಂಗಳೂರು ಅಧೋಗತಿಯಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ಎಲ್ಲಿ ಅಧೋಗತಿಯಾಗಿದೆ? ಇದೇ ಅಶೋಕ್ ಅವರು ಸಂವಿಧಾನಿಕ ಸಂಸ್ಥೆ ಲೋಕಾಯುಕ್ತ ಬಗ್ಗೆ ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿ ಅಪಮಾನ ಮಾಡಿದ್ದಾರೆ. ಎಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿದೆ? ವಿರೋಧ ಪಕ್ಷದ ನಾಯಕರಾಗಿ ಅವರು ನೀಡಿರುವ ಹೇಳಿಕೆ ಮ್ಯಾಚ್ ಫಿಕ್ಸಿಂಗಾ?” ಎಂದು ಕಿಡಿಕಾರಿದರು.

ವಕ್ಫ್ ಅನ್ಯಾಯ ಕುರಿತು ‘JPC ಅಧ್ಯಕ್ಷ ಜಗದಾಂಬಿಕಾ ಪಾಲ್‍’ಗೆ ಗೋವಿಂದ ಕಾರಜೋಳರಿಂದ ವರದಿ ಸಲ್ಲಿಕೆ

`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!

Share. Facebook Twitter LinkedIn WhatsApp Email

Related Posts

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

1 Min Read

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

3 Mins Read

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

2 Mins Read
Recent News

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

State News
KARNATAKA

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

By kannadanewsnow05 KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.